Breaking News

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ – ಮಂತ್ರಾಲಯಕ್ಕೆ ತೆರಳುತ್ತಿದ್ದ ಐವರು ದುರ್ಮರಣ‌

Spread the love

ಕೊಪ್ಪಳ: ಗೂಡ್ಸ್‌ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ ಡಿಕ್ಕಿಯಾದ ಪರಿಣಾಮ ಐವರು ಸಾವನ್ನಪ್ಪಿದ ಘಟನೆ ಕುಕನೂರು  ತಾಲೂಕಿನ ಭಾನಾಪೂರದ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ನಡೆದಿದೆ. ಅಪಘಾತದಲ್ಲಿ 4 ಮಂದಿ ಗಂಭಿರವಾಗಿ ಗಾಯಗೊಂಡಿದ್ದಾರೆ.

ಕೆಂಚಮ್ಮ ಬಾಳೆಕಾಯಿ(35), ಅಮೃತಾ ಕೋಟ್ಯಾಳ್ (25), ರಮೇಶ್ ಬಳ್ಳಾರಿ (45) ಮತ್ತು ಪ್ರವೀಣ್ ಬಾಳೆಕಾಯಿ (40) ಹಾಗೂ ಚಿನ್ಮಯ್ ಮೃತಪಟ್ಟವರು. ಇವರೆಲ್ಲ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕಬ್ಬಾರ್ ಗ್ರಾಮದವರು ಎಂದು ತಿಳಿದು ಬಂದಿದೆ. ಓಮ್ನಿಯಲ್ಲಿ ಮಂತ್ರಾಲಯಕ್ಕೆ  ತೆರಳುತ್ತಿದ್ದ ವೇಳೆ ಈ ಅಪಘಾತ ನಡೆದಿದೆ.

ಪಕ್ಕದ ರಸ್ತೆಯಲ್ಲಿ ಹೋಗುತ್ತಿದ್ದ ಅಶೋಕ್ ಲೇಲ್ಯಾಂಡ್ ವಾಹನ ಡಿವೈಡರ್ ದಾಟಿ ಓಮ್ನಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ. ಗಾಯಾಳುಗಳಿಗೆ ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕುಕನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದೆ.


Spread the love

About Laxminews 24x7

Check Also

ತಡವಾಗಿ ಹೋಗಿದ್ದೇ ಹಿಂದಿನ ಸಾಲಲ್ಲಿ ಕೂರಲು ಕಾರಣ: ಸಿದ್ದರಾಮಯ್ಯ ಸ್ಪಷ್ಟನೆ

Spread the loveಬೆಂಗಳೂರು: ದೆಹಲಿಯಲ್ಲಿ ನಡೆದ ಸೋನಿಯಾ ಗಾಂಧಿಯವರ  ಆತ್ಮಚರಿತ್ರೆ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಹಿಂದೆ ಕುಳಿತುಕೊಳ್ಳಲು ತಡವಾಗಿ ಬಂದಿದ್ದೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ