Breaking News

ಜಿಬಿಎ ಚುನಾವಣೆ ನಡೆಸುವಂತೆ ರಾಜ್ಯಪಾಲರಿಗೆ ಜೆಡಿಎಸ್ ನಿಯೋಗ ದೂರು

Spread the love

ಬೆಂಗಳೂರು: ಜಿಬಿಎ  ಚುನಾವಣೆ ನಡೆಸುವಂತೆ ರಾಜ್ಯಪಾಲರಿಗೆ ಜೆಡಿಎಸ್  ಕಾನೂನು ಘಟಕದಿಂದ ದೂರು ನೀಡಲಾಗಿದೆ.

ಜೆಡಿಎಸ್ ಕಾನೂನು ಘಟಕದ ಅಧ್ಯಕ್ಷ ಎ.ಪಿ ರಂಗನಾಥ್ ನೇತೃತ್ವದಲ್ಲಿ ದೂರು ಸಲ್ಲಿಕೆ ಮಾಡಲಾಗಿದ್ದು, ಜಿಬಿಎ ಚುನಾವಣೆ ನಡೆಸಲು ಸರ್ಕಾರಕ್ಕೆ ಸೂಚನೆ ನೀಡುವಂತೆ ರಾಜ್ಯಪಾರಿಗೆ ಮನವಿ ಮಾಡಿದ್ದಾರೆ.

ಬಳಿಕ ಮಾತನಾಡಿದ ರಂಗನಾಥ್, ಕೋರ್ಟ್ ಆದೇಶ ಇದ್ದರೂ ಕೂಡಾ ರಾಜ್ಯ ಸರ್ಕಾರ ಉದ್ದೇಶ ಪೂರ್ವಕವಾಗಿ ಜಿಬಿಎ ಚುನಾವಣೆ ಮುಂದೂಡಿಕೆ ಮಾಡುತ್ತಿದೆ. ಬೆಂಗಳೂರು ಜನರ ಕಷ್ಟ ಕೇಳುವವರಿಲ್ಲ. ಸ್ಥಳೀಯ ಸಂಸ್ಥೆಯಲ್ಲಿ ಜನಪ್ರತಿನಿಧಿಗಳು ಇಲ್ಲದೇ ಅನಾನುಕೂಲಗಳು ಉಂಟಾಗುತ್ತಿವೆ. ರಾಜ್ಯ ಸರ್ಕಾರ ಕೂಡಲೇ ಜಿಬಿಎ ಚುನಾವಣೆ ನಡೆಸಬೇಕು. ಈಗಾಗಲೇ ಮುಖ್ಯ ಚುನಾವಣಾ ಆಯುಕ್ತರಿಗೂ ದೂರು ನೀಡಲಾಗಿದೆ. ಈಗ ರಾಜ್ಯಪಾಲರಿಗೆ ದೂರು ನೀಡಿದ್ದೇವೆ. ಈ ಬಗ್ಗೆ ರಾಷ್ಟಪತಿಗಳಿಗೆ ರಾಜ್ಯಪಾಲರು ವರದಿ ನೀಡಬೇಕೆಂದು ಮನವಿ ಮಾಡಿದ್ದೇವೆ ಎಂದಿದ್ದಾರೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ