Breaking News

ಬೆಳಗಾವಿ:ಕೋಟೆ ಕೆರೆ ಹೆಸರಲ್ಲಿ ಅನುದಾನ ದುರ್ಬಳಕೆ!

Spread the love

ಬೆಳಗಾವಿ: ಐತಿಹಾಸಿಕ ಕೋಟೆ ಕೆರೆ ಅಭಿವೃದ್ಧಿ ವಿಷಯ ಮತ್ತೆ ಮುನ್ನೆಲೆಗೆ ಬಂದಿದ್ದು, ಪಾಲಿಕೆ ಕೈಗೊಂಡಿರುವ ಕಾಮಗಾರಿಗೆ ಪರ-ವಿರೋಧ ವ್ಯಕ್ತವಾಗಿದೆ.

ಸ್ಮಾರ್ಟ್ ಸಿಟಿ ಯೋಜನೆಯಡಿ ಮೂರು ಹಂತದಲ್ಲಿ 9.61 ಕೋಟಿ ರೂ. ವೆಚ್ಚದಲ್ಲಿ ಕೋಟೆ ಕೆರೆ ಅಭಿವೃದ್ಧಿ ಪಡಿಸಿ ಪಾಲಿಕೆಗೆ ಹಸ್ತಾಂತರಿಸಲಾಗಿದೆ. ಆದರೆ, ವರ್ಷಗಳಿಂದ ನಿರ್ವಹಣೆ ಇಲ್ಲದೆ ಹಾಳಾಗುತ್ತಿರುವ ಕೆರೆ ಹೆಸರಿನಲ್ಲಿ ಕೇಂದ್ರ ಸರ್ಕಾರದ ಅಮೃತ ಯೋಜನೆ ಅಡಿಯಲ್ಲಿ ಮತ್ತೆ 10 ಕೋಟಿ ರೂ. ವೆಚ್ಚದ ಕಾಮಗಾರಿ ಕೈಗೊಂಡಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.

2021-22ನೇ ಸಾಲಿನಲ್ಲಿ ಸ್ಮಾರ್ಟ್ ಸಿಟಿ ಯೋಜನೆಯ ಮೊದಲ ಹಂತದ 3.96 ಕೋಟಿ ರೂ. ವೆಚ್ಚದಲ್ಲಿ ಕೆರೆಗೆ ಬೇಲಿ, ಆವರಣ ಗೋಡೆ, ಎಸ್‌ಡಬ್ಲುೃಡಿ ಚರಂಡಿಯೊಂದಿಗೆ ತಡೆಗೋಡೆ, ಬೆಳಕಿನ ವ್ಯವಸ್ಥೆ, ಎರಡನೇ ಹಂತದಲ್ಲಿ 2.16 ಕೋಟಿ ರೂ. ವೆಚ್ಚದಲ್ಲಿ ಶೌಚಗೃಹ, ವಿದ್ಯುತ್ ಉಪಕರಣಗಳ ಅಳವಡಿಕೆ, ಭದ್ರತಾ ಸಿಬ್ಬಂದಿ ಕೊಠಡಿ, ಪಾದಚಾರಿ ಮಾರ್ಗ, ಬೆಳಕಿನ ವ್ಯವಸ್ಥೆ, ಐಸಿಟಿ ಕಾಮಗಾರಿ ಹಾಗೂ ಮೂರನೇ ಹಂತದಲ್ಲಿ 2.21 ಕೋಟಿ ರೂ. ವೆಚ್ಚದಲ್ಲಿ ಮಕ್ಕಳ ಕ್ರೀಡಾ ಸಾಮಗ್ರಿಗಳು, ವ್ಯಾಯಾಮ ಸಲಕರಣೆ ಅಳವಡಿಕೆ, ಎಲ್‌ಇಡಿ ಲೈಟಿಂಗ್, ನೀರು ಸ್ವಚ್ಛತೆ, ಹೂಳೆತ್ತುವುದು ಸೇರಿದಂತೆ ವಿವಿಧ ಕಾಮಗಾರಿ ಕೈಗೊಳ್ಳಲಾಗಿತ್ತು.

ಇದೀಗ ಅಮೃತ ಯೋಜನೆಯಡಿ ಮತ್ತೇ ಕಾಮಗಾರಿ ಕೈಗೊಂಡಿರುವುದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ಮಹಾನಗರ ಪಾಲಿಕೆ ಕೋಟೆ ಕೆರೆ ನಿರ್ವಹಣೆ ಮಾಡುವಲ್ಲಿ ವಿಫಲವಾಗಿದೆ. ಕೋಟ್ಯಂತರ ರೂ. ವೆಚ್ಚದಲ್ಲಿ ಕೈಗೊಂಡಿರುವ ಕಾಮಗಾರಿ ಉಳಿಸಿಕೊಂಡಿಲ್ಲ. ನಿರ್ವಹಣೆ ಹೆಸರಿನಲ್ಲಿ ಲಕ್ಷಾಂತರ ರೂ. ವೆಚ್ಚ ಮಾಡುತ್ತಿದೆ. ಆದರೆ, ಸಾರ್ವಜನಿಕರಿಗೆ ಸಮರ್ಪಕವಾಗಿ ಬಳಕೆಯಾಗುತ್ತಿಲ್ಲ. ಕೆರೆ ಸದುಪಯೋಗಕ್ಕಿಂತ ದುರ್ಬಳಕೆ ಹೆಚ್ಚಾಗುತ್ತಿದೆ. ಅನುದಾನ ದುರ್ಬಳಕೆ

ಕುರಿತು ಸರ್ಕಾರ ಮಧ್ಯಪ್ರವೇಶಿಸಿ ತನಿಖೆಗೆ ಒಳಪಡಿಸಬೇಕು ಎಂದು ನಿವೃತ್ತ ನೌಕರರು, ಹೋರಾಟಗಾರರು, ವ್ಯಾಪಾರಿಗಳು ಆಗ್ರಹಿಸಿದ್ದಾರೆ.


Spread the love

About Laxminews 24x7

Check Also

ನಾಲೆಯಲ್ಲಿ ನವವಿವಾಹಿತೆ ಕಣ್ಮರೆ – ಪತಿ ವಿರುದ್ಧ ಕೊಲೆ ಆರೋಪ

Spread the loveಹಾಸನ: ನಾಲೆಯಲ್ಲಿ ನವವಿವಾಹಿತೆ ಕಣ್ಮರೆಯಾದ ಘಟನೆ ಚನ್ನರಾಯಪಟ್ಟಣ ತಾಲೂಕಿನ ಚಿಕ್ಕನಾಯಕನಹಳ್ಳಿ ಗ್ರಾಮದಲ್ಲಿನಡೆದಿದೆ. ಜಯಶೀಲಾ.ಬಿ.ಕೆ (ಪ್ರಿಯಾಂಕ 24) ಅನುಮಾನಾಸ್ಪದವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ