ಬೆಳಗಾವಿ: ಸವದತ್ತಿ ಪಟ್ಟಣದ ಭಕ್ತಿ ಮತ್ತು ಸಾಂಸ್ಕೃತಿಕ ಪರಂಪರೆಯ ಸಂಕೇತವಾಗಿರುವ ಶ್ರೀ ಗ್ರಾಮ ದೇವಿ ಜಾತ್ರಾ ಮಹೋತ್ಸವವು ಸುಮಾರು 43 ವರ್ಷಗಳ (4 ದಶಕ) ಸುದೀರ್ಘ ಕಾಲದ ನಂತರ ಇದೇ ಮೇ 4ರಂದು ಅತ್ಯಂತ ವೈಭವದಿಂದ ಜರುಗಲಿದೆ.
ಈ ಐತಿಹಾಸಿಕ ಜಾತ್ರೆಗೆ ರಾಜ್ಯದಾದ್ಯಂತ ಲಕ್ಷಾಂತರ ಭಕ್ತಾದಿಗಳು ಹಾಗೂ ವ್ಯಾಪಾರಸ್ಥರು ಆಗಮಿಸುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ, ಇಂದು ಜಿಲ್ಲಾಧಿಕಾರಿಗಳಾದ ಶ್ರೀ ಮೊಹಮ್ಮದ್ ರೋಷನ್ ಅವರನ್ನು ಭೇಟಿ ಮಾಡಿ ಈ ಕೆಳಗಿನ ಪ್ರಮುಖ ವಿಷಯಗಳ ಕುರಿತು ಸವಿಸ್ತಾರವಾಗಿ ಚರ್ಚೆ ನಡೆಸಲಾಯಿತು:
ಅಡುಗೆ ಅನಿಲ (LPG Gas) ಪೂರೈಕೆ: ಜಾತ್ರೆಯ ಸಮಯದಲ್ಲಿ ಭಕ್ತಾದಿಗಳಿಗೆ ಮತ್ತು ಅನ್ನದಾಸೋಹಕ್ಕೆ ಯಾವುದೇ ಕೊರತೆಯಾಗದಂತೆ ನಿರಂತರ ಅಡುಗೆ ಅನಿಲ ಪೂರೈಕೆ ಹಾಗೂ ಸುರಕ್ಷತಾ ಕ್ರಮಗಳ ಬಗ್ಗೆ ಚರ್ಚಿಸಲಾಯಿತು ಹಾಗೂ ಮೂಲಭೂತ ಸೌಕರ್ಯಗಳಿಗೆ ಆದ್ಯತೆ ನೀಡಲು ಸೂಚಿಸಲಾಯಿತು.
ದಶಕಗಳ ಬಳಿಕ ನಡೆಯುತ್ತಿರುವ ಈ ಸಂಭ್ರಮವನ್ನು ಯಶಸ್ವಿಗೊಳಿಸಲು ಹಾಗೂ ಸವದತ್ತಿಯ ಘನತೆಯನ್ನು ಹೆಚ್ಚಿಸಲು ನಾವು ಕಟಿಬದ್ಧರಾಗಿದ್ದೇವೆ.
Laxmi News 24×7