Breaking News

ಗ್ರಾ.ಪಂ ಅವ್ಯವಹಾರ: ಅಪರಾಧಿಗಳಿಗೆ ಶಿಕ್ಷೆ ಪ್ರಕಟ

Spread the love

ಬೆಳಗಾವಿ : ಜಿಲ್ಲೆಯ ನಿಪ್ಪಾಣಿ ತಾಲೂಕಿನ ಗಳಗತಾ ಗ್ರಾಮ ಪಂಚಾಯತಿಯಲ್ಲಿ ಅವ್ಯವಹಾರ ನಡೆಸಿದ ಗ್ರಾಪಂ ಅಧ್ಯಕ್ಷೆ ಮಾಧುರಿ ಪಾಟೀಲ, ಪಿಡಿಓ ಚಂದ್ರಕಾಂತ ಮುರಗೋಡ,ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ರುದ್ರಮುನಿಸ್ವಾಮಿ ಚಿಕ್ಕಮಠ,ಗ್ರಾಪಂ ಸದಸ್ಯ ಲಕ್ಷ್ಮಣ ಶಿಪ್ಪೂರೆ,ಬಾಳಾಸಾಹೇಬ ಬೇಡಿಕಿಹಾಳ ಮತ್ತು ದಿನಗೂಲಿ ನೌಕರ ವಿಕಾಸ ಹಟ್ಟಿಯವರ ಅಪರಾಧಿಗಳಿಗೆ 4ನೇ ಅಧಿಕ ಜಿಲ್ಲಾ ಸತ್ರ ಮತ್ತು ವಿಶೇಷ ನ್ಯಾಯಾಲಯ ಮೂರು ವರ್ಷ ಕಾರಾಗೃಹ ಶಿಕ್ಷೆ,ಮತ್ತು 100100 ರೂ. ದಂಡ ವಿಧಿಸಿ ಈಚೆಗೆ ತೀರ್ಪು ಪ್ರಕಟಿಸಿದೆ.
ಗಳತಗಾ ಗ್ರಾಪಂ ಅಪರಾಧ 2009 ರಲ್ಲಿ ಸಿಮೆಂಟ್ ರಸ್ತೆ ಕಾಮಗಾರಿ ನಡೆಸುವುದು ಮತ್ತು ಹಳದಹಟ್ಟಿ ಗ್ರಾಮದ ಹನುಮಾನ ಮಂದಿರ ಸಾರ್ವಜನಿಕ ಜಾಗದಲ್ಲಿ ಕ್ರಿಯಾ ಯೋಜನೆಯಲ್ಲಿ ನಮೂದಿಸಿದಂತೆ ಕಾಮಗಾರಿ ಅನುಷ್ಠಾನಗೊಳ್ಳದೆ ಸರ್ಕಾರಕ್ಕೆ ಆರ್ಥಿಕ ನಷ್ಟ ಮಾಡಿರುವ ಕುರಿತು ಲೋಕಾಯುಕ್ತ ಠಾಣೆಯಲ್ಲಿ ದೂರು ದಾಖಲಾಗಿತ್ತು.ಈ ಕುರಿತು ಲೋಕಾಯುಕ್ತ ಅಧಿಕಾರಿಗಳು ತನಿಖೆ ನಡೆಸಿ ದೋಷಾರೋಪಣೆ ಪಟ್ಟಿ ನ್ಯಾಯಾಲಯಕ್ಕೆ ಸಲ್ಲಿಸಿದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯದೀಶರು ಅಪಾಧಿತರಿಗೆ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ. ಸರ್ಕಾರ ಪರ ಸರ್ಕಾರಿ ಅಭಿಯೋಜಕ ಪ್ರವೀಣ ಅಗಸಗಿ ವಾದ ಮಂಡಿಸಿದ್ದಾರೆ.

Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ