Breaking News

ಗ್ರಾಮ ಪಂಚಾಯತಿಗಳ ಅವಧಿ ಮುಕ್ತಾಯ; ಚುನಾವಣೆ ಮೀಸಲು ನಿಗದಿ: ಸರ್ಕಾರಕ್ಕೆ ಕೊನೆಯ ಅವಕಾಶ ಕೊಟ್ಟ ಕರ್ನಾಟಕ ಹೈಕೋರ್ಟ್‌

Spread the love

ಬೆಂಗಳೂರು: ಅವಧಿ ಪೂರ್ಣಗೊಂಡಿರುವ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಈ ತಿಂಗಳಾಂತ್ಯಕ್ಕೆ ಅವಧಿ ಮುಗಿಯಲಿರುವ ಗ್ರಾಮ ಪಂಚಾಯತಿಗಳ ಚುನಾವಣೆಗೆ ಮೀಸಲು ನಿಗದಿ ಸಂಬಂಧ ಉತ್ತರಿಸಲು ಕರ್ನಾಟಕ ಹೈಕೋರ್ಟ್‌ನಿಂದ ರಾಜ್ಯ ಸರಕಾರಕ್ಕೆ ಕೊನೆ ಅವಕಾಶ ನೀಡಲಾಗಿದೆ.

ಚುನಾವಣೆಗೆ ಮೀಸಲು ಅಧಿಸೂಚನೆ ಹೊರಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಸರಕಾರಕ್ಕೆ ನಿರ್ದೇಶಿಸುವಂತೆ ಕೋರಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಕುರಿತು ಸಿಜೆ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರಿದ್ದ ವಿಭಾಗೀಯ ಪೀಠ ಬುಧವಾರ ವಿಚಾರಣೆ ನಡೆಸಿತು.

ವಾದ -ಪ್ರ ತಿವಾದ ಆಲಿಸಿದ ಬಳಿಕ ನ್ಯಾಯಾಲಯ ಒಂದು ವಾರ ಕಾಲಾವಕಾಶ ನೀಡುವಂತೆ ಸರಕಾರಿ ವಕೀಲರ ಮನವಿ ಪರಿಗಣಿಸಿ, ಅರ್ಜಿ ಕುರಿತು ಉತ್ತರಿಸಲು ಸರಕಾರಕ್ಕೆ ಅಂತಿಮ ಅವಕಾಶ ನೀಡಿ ವಿಚಾರಣೆಯನ್ನು ಫೆ.5ಕ್ಕೆ ಮುಂದೂಡಿತು.

ರಾಜ್ಯ ಚುನಾವಣಾ ಆಯೋಗದ ಪರ ವಾದಿಸಿದ ಹಿರಿಯ ವಕೀಲ ಕೆ.ಎನ್‌. ಫಣೀಂದ್ರ, ರಾಜ್ಯದ ಬಹುತೇಕ ಎಲ್ಲ ಗ್ರಾಮ ಪಂಚಾಯತಿಗಳ ಅವಧಿ ತಿಂಗಳಾಂತ್ಯದೊಳಗೆ ಪೂರ್ಣಗೊಳ್ಳಲಿದೆ. 187 ನಗರ ಸ್ಥಳೀಯ ಸಂಸ್ಥೆಗಳ ಅವಧಿ ಈಗಾಗಲೇ ಪೂರ್ಣಗೊಂಡಿದೆ. ಸಕಾಲದಲ್ಲಿ ಚುನಾವಣೆ ನಡೆಸಬೇಕೆಂಬ ಸಾಂವಿಧಾನಿಕ ಪೀಠದ ತೀರ್ಪಿಗೆ ಚುನಾವಣಾ ಆಯೋಗ ಬದ್ಧವಾಗಿದ್ದು, ಮೀಸಲು ಅಧಿಸೂಚನೆ ಹೊರಡಿಸುವಂತೆ ಸರಕಾರಕ್ಕೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಅದಕ್ಕಾಗಿಯೇ ಈ ಅರ್ಜಿ ಸಲ್ಲಿಸಲಾಗಿದೆ. ಅರ್ಜಿ ಸಂಬಂಧ ನ.12ರಂದೇ ನ್ಯಾಯಾಲಯ ಪ್ರತಿವಾದಿಗಳಿಗೆ ನೋಟಿಸ್‌ ಜಾರಿಗೊಳಿಸಿದೆ ಎಂದು ತಿಳಿಸಿದರು.

ಸರಕಾರದ ಪರ ಹಾಜರಿದ್ದ ಹೆಚ್ಚುವರಿ ಸರಕಾರಿ ವಕೀಲರು, ” ಮೀಸಲು ಸಿದ್ಧಪಡಿಸುವ ಸಂಬಂಧ ಎಲ್ಲ ಜಿಲ್ಲಾಧಿಕಾರಿಗಳಿಗೆ ಈಗಾಗಲೇ ನಿರ್ದೇಶನ ನೀಡಲಾಗಿದೆ. ಅರ್ಜಿ ವಿಚಾರಣೆಯನ್ನು ಅಲ್ಪಾವಧಿಗೆ ಮುಂದೂಡಬೇಕು” ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.

ವಾದ ಮುಂದುವರಿಸಿದ ಫಣೀಂದ್ರ, ರಾಜ್ಯದಲ್ಲಿಸುಮಾರು 6 ಸಾವಿರ ಗ್ರಾಮ ಪಂಚಾಯತಿಗಳು ಹಾಗೂ 187 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಬೇಕಿದೆ. ಅವಧಿ ಪೂರ್ಣಗೊಂಡಿರುವ ಎಲ್ಲನಗರ ಸ್ಥಳೀಯ ಸಂಸ್ಥೆಗಳಿಗೆ ಈಗಾಗಲೇ ಆಡಳಿತಾಧಿಕಾರಿ ನೇಮಕ ಮಾಡಲಾಗಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.

 


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ