Breaking News

ಬೆಳಗಾವಿಗೆ ಆಗಮಿಸಿದ ಕಿತ್ತೂರು ರಾಣಿ ಚನ್ನಮ್ಮನ ವೀರಜ್ಯೋತಿಗೆ ಅದ್ಧೂರಿ ಸ್ವಾಗತ

Spread the love

ಬೆಳಗಾವಿ: ಕಿತ್ತೂರು ರಾಣಿ ಚನ್ನಮ್ಮನ ವಿಜಯದ ಸಂಕೇತವಾಗಿರುವ ವೀರಜ್ಯೋತಿ ಬೆಂಗಳೂರಿನಿಂದ ಬೆಳಗಾವಿಗೆ ಆಗಮಿಸಿದ್ದು, ನಗರದ ಚನ್ನಮ್ಮ ವೃತ್ತದಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು.

ಬೆಳಗಾವಿ ಮಹಾನಗರ ಪಾಲಿಕೆಯ ಉಪಮೇಯರ್ ಹನಮಂತ ಕೊಂಗಾಲಿ ಅವರು ಚನ್ನಮ್ಮನ ವೀರಜ್ಯೋತಿಯನ್ನು ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಕನ್ನಡಪರ ಹೋರಾಟಗಾರ ಅಶೋಕ ಚಂದರಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಚನ್ನಮ್ಮನ ವೀರಜ್ಯೋತಿ ಎರಡು ದಿನಗಳ ಕಾಲ ಬೆಳಗಾವಿ ನಗರದಲ್ಲಿ ಸಂಚರಿಸಲಿದೆ. ಬಳಿಕ ಐತಿಹಾಸಿಕ ಕಿತ್ತೂರಿಗೆ ತೆರಳಲಿದ್ದು, ಕಿತ್ತೂರು ಉತ್ಸವದ ಸಂಭ್ರಮಕ್ಕೆ ಮತ್ತಷ್ಟು ಮೆರುಗು ನೀಡಲಿದೆ.

ವೀರಜ್ಯೋತಿಯ ಆಗಮನದಿಂದ ಬೆಳಗಾವಿಯಲ್ಲಿ ಕಿತ್ತೂರು ರಾಣಿ ಚನ್ನಮ್ಮನ ಶೌರ್ಯ, ಸಾಹಸ ಹಾಗೂ ಸ್ವಾತಂತ್ರ್ಯ ಹೋರಾಟದ ಸ್ಮರಣೆ ಮತ್ತೊಮ್ಮೆ ಅನುರಣಿಸಿದೆ.


Spread the love

About Laxminews 24x7

Check Also

ಮೂರು ಕಡೆ ದಾಳಿ: 9 ಕೆಜಿಗೂ ಅಧಿಕ ಮಾದಕವಸ್ತು ವಶ

Spread the loveದೇಶಾದ್ಯಂತ ಮಾದಕವಸ್ತು ಕಳ್ಳಸಾಗಣೆಗೆ ಕಡಿವಾಣ ಹಾಕಲು ಆದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು ನಡೆಸಿದ ಸರಣಿ ಕಾರ್ಯಾಚರಣೆಗಳಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ