Breaking News

ಹಿಜಾಬ್‌ಗೆ ಗ್ರೀನ್ ಸಿಗ್ನಲ್; ಸರ್ಕಾರದ ನಡೆಗೆ ಹಿಂದೂ ಸಂಘಟನೆಗಳ ವಿರೋಧ – ಉಗ್ರ ಪ್ರತಿಭಟನೆ ಎಚ್ಚರಿಕೆ

Spread the love

ಉಡುಪಿ: ಹಿಜಾಬ್  ವಿಚಾರ ಮತ್ತೆ ಮುನ್ನಲೆಗೆ ಬಂದಿದ್ದು, ಶಾಲಾ – ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಗ್ರೀನ್ ಸಿಗ್ನಲ್ ಕೊಟ್ಟಿರುವ ಸರ್ಕಾರದ ನಡೆಗೆ ಹಿಂದೂ ಸಂಘಟನೆಗಳು ) ಭಾರೀ ವಿರೋಧ ವ್ಯಕ್ತಪಡಿಸಿವೆ. ಅಲ್ಲದೇ ರಾಜ್ಯಾದ್ಯಂತ ಉಗ್ರ ಪ್ರತಿಭಟನೆಯ ಎಚ್ಚರಿಕೆಯನ್ನೂ ನೀಡಿದೆ.

ಈ ಕುರಿತು ಹಿಂದೂ ಮುಖಂಡ ಸುನೀಲ್ ಕೆ.ಆರ್  ಮಾತನಾಡಿ, ಸರ್ಕಾರ ಇಸ್ಲಾಮಿಕರಣಕ್ಕಾಗಿ ಈ ನಿರ್ಧಾರ ತೆಗೆದುಕೊಂಡಿದೆ. ರಾಜ್ಯ ಸರ್ಕಾರಕ್ಕೆ ಮುಸ್ಲಿಮರ ಓಲೈಕೆಯೆ ಬಹು ಮುಖ್ಯವಾದಂತಿದೆ. ಮೂಲಭೂತವಾದಿ ಸಂಘಟನೆಗಳ ಜೊತೆಗೆ ರಾಜ್ಯ ಸರ್ಕಾರ ನಿಂತಿದೆ ಎಂದು ಕಿಡಿಕಾರಿದ್ದಾರೆ.

ಹಿಜಾಬ್ ವಿಚಾರ ಮತ್ತೆ ಮುನ್ನಲೆಗೆ ತರುವ ಮೂಲಕ ಕಾಂಗ್ರೆಸ್ ಸರ್ಕಾರ ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದೆ. ಈ ನಿರ್ಧಾರದ ಹಿಂದೆ ಬಹಳ ದೊಡ್ಡ ಷಡ್ಯಂತ್ರವಿದೆ. ಸರ್ಕಾರ ಈ ನಿರ್ಧಾರದಿಂದ ಹಿಂದೆ ಸರಿಬೇಕು. ಇಲ್ಲವಾದರೆ ಉಗ್ರ ಪ್ರತಿಭಟನೆಯನ್ನು ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.


Spread the love

About Laxminews 24x7

Check Also

ರಾಜ್ಯದಲ್ಲಿ ಬರ – 177 ತಾಲೂಕುಗಳಲ್ಲಿ 46,324 ಕೋಟಿ ಬೆಳೆ ನಷ್ಟ , 7,142 ಕೋಟಿ ನೆರವಿಗೆ ಮನವಿ

Spread the loveಬೆಂಗಳೂರು: ರಾಜ್ಯದ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನ ಬರಪೀಡಿತ  ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿ ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ