Breaking News

ಮುರಗೋಡ-ಹೊಸಳ್ಳಿ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ  ಭೂಮಿಪೂಜೆ

Spread the love

ಮುರಗೋಡ: ಗ್ರಾಮಿಣ ಪ್ರದೇಶದ ಅಭಿವೃದ್ಧಿ ಕಾಮಗಾರಿಗಳಿಂದ ದೇಶದ ಪ್ರಗತಿ ಸಾಧ್ಯ ಎಂದು ಸಂಸದ ಜಗದೀಶ ಶೆಟ್ಟರ ಹೇಳಿದರು.
ಮುರಗೋಡ-ಹೊಸಳ್ಳಿ ವ್ಯಾಪ್ತಿಯ ಹಿರೇಕೊಪ್ಪ, ಚಿಕ್ಕೊಪ್ಪ ಮತ್ತು ಹುಲಿಕೇರಿ ತಾಂಡಾಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ  ಭೂಮಿಪೂಜೆ ನೆರವೇರಿಸಿ ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಗ್ರಾಮ ಸ್ವರಾಜ್ಯದ ಕನಸು ನನಸಾಗಿಸಲು ಎಲ್ಲರ ಸಹಕಾರ ಅಗತ್ಯ ಎಂದರು.
ಮಾಜಿ ಶಾಸಕರಾದ ಡಾ.ವಿಶ್ವನಾಥ ಪಾಟೀಲ, ಜಗದೀಶ ಮೆಟಗುಡ್ಡ ಮಾತನಾಡಿ, ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿ ಜನಸಾಮಾನ್ಯರ ಆರ್ಥಿಕ ಸ್ಥಿತಿ ಹದಗೆಟ್ಟಿದೆ. ಈ ಸರ್ಕಾರದಿಂದ ಯಾವುದೇ ಅಭಿವೃದ್ಧಿ ಸಾಧ್ಯವಿಲ್ಲ. ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಬೇಕು ಎಂದರು.
ಜೆಡಿಎಸ್ ಜಿಲ್ಲಾಧ್ಯಕ್ಷ  ಶಂಕರ ಮಾಡಲಗಿ, ಉದ್ಯಮಿ ವಿಜಯ ಮೆಟಗುಡ್ಡ, ಮಡಿವಾಳಪ್ಪ ಹೋಟಿ, ಬಿಜೆಪಿ ಅಧ್ಯಕ್ಷ ಸುಭಾಸ ತುರಮರಿ, ಗುರುಪಾದ ಕಳ್ಳಿ, ಕಾರ್ತಿಕ ಪಾಟೀಲ, ಶ್ರೀಕಾಂತ ಶಿರಹಟ್ಟಿ, ಬಸವರಾಜ ಮುರಕಿಭಾವಿ, ಚಂದನ ಕೌಜಲಗಿ ಇತರರಿದ್ದರು.

Spread the love

About Laxminews 24x7

Check Also

ತೊಂದರೆ ಆದ್ರೆ ಮಾತ್ರ ಕಾಯ್ದೆ ತೋರಿಸುತ್ತೀರಿ, ಅವಘಡ ಆಗಿದ್ರೆ ಯಾರು ಹೊಣೆ? – ದೇವಿಗೆರೆಯಲ್ಲಿ ಗಣೇಶ ವಿಸರ್ಜನೆಗೆ ಡಿಸಿ ಅಸಮಾಧಾನ

Spread the loveಹಾಸನ: ದೇವಿಗೆರೆಯಲ್ಲಿ ಗಣೇಶ ವಿಸರ್ಜನೆ  ವೇಳೆ ಯಾವುದಾದರೂ ಅವಘಡ ಸಂಭವಿಸಿದ್ದರೆ ಜಿಲ್ಲಾಡಳಿತ ಸಮಸ್ಯೆಗೆ ಸಿಲುಕುತ್ತಿತ್ತು. ಅದರ ಹೊಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ