Breaking News

ಗ್ರೂಪ್ ಇನ್ಶೂರೆನ್ಸ್ ಹಣ ಬಿಡುಗಡೆಗೆ 3 ಸಾವಿರ ರೂ. ಲಂಚ – ದ್ವಿತೀಯ ದರ್ಜೆ ಸಹಾಯಕಿ ಲೋಕಾ ಬಲೆಗೆ

Spread the love

ಹಾವೇರಿ: ಗ್ರೂಪ್ ಇನ್ಶೂರೆನ್ಸ್  ಮಂಜೂರು ಮಾಡಿಕೊಡಲು 3 ಸಾವಿರ ರೂ. ಲಂಚ ಸ್ವೀಕಾರ ಮಾಡುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು  ಸಹಕಾರ ಸಂಘಗಳ ಉಪಬಂಧಕರ ಕಚೇರಿಯ ದ್ವಿತೀಯ ದರ್ಜೆ ಸಹಾಯಕಿ ಬಂಧನ ಮಾಡಿದ್ದಾರೆ.

ಹಾವೇರಿಯ ದೇವಗಿರಿ ಗ್ರಾಮದ ಬಳಿ ಇರುವ ಜಿಲ್ಲಾಧಿಕಾರಿ ಕಚೇರಿಯ ಸಹಕಾರ ಸಂಘಗಳ ಉಪನಿಬಂಧಕರ ಕಚೇರಿಯಲ್ಲಿ ಬಂಧನ ಮಾಡಿದ್ದಾರೆ. ಅಕ್ಕಮ್ಮ ಬಿದರೇರ್ ಲಂಚ ಸ್ವೀಕಾರ ಮಾಡುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಮಹದೇವ ಜೇಕಿನಕಟ್ಟಿ ಎಂಬುವರ ವಯೋ ನಿವೃತ್ತಿಯಾಗಿದ್ದು, ಗುಂಪು ವಿಮೆ ಮೊತ್ತ ಬಿಲ್ ಮಾಡಿಕೊಡಲು 3 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಹಣ ಸ್ವೀಕಾರ ಮಾಡುತ್ತಿದ್ದ ವೇಳೆ ಹಾವೇರಿ ಲೋಕಾಯುಕ್ತ ಡಿವೈಎಸ್ಪಿ ಮಧುಸೂದನ್ ನೇತೃತ್ವದಲ್ಲಿ ಟ್ರ‍್ಯಾಪ್ ಮಾಡಲಾಗಿದೆ. ಬಂಧಿತ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಲೋಕಾಯುಕ್ತ ಪೊಲೀಸರು ಒಪ್ಪಿಸಿದ್ದಾರೆ.


Spread the love

About Laxminews 24x7

Check Also

ಇಂದಿರಾ ಗಾಂಧಿ ಇದ್ದಿದ್ರೆ ಬಿಜೆಪಿ ಬ್ಯಾನ್ ಮಾಡ್ತಿದ್ರು: ವಿವಾದ ಸೃಷ್ಟಿಸಿದ ಅಶೋಕ್ ಗೆಹ್ಲೋಟ್ ಹೇಳಿಕೆ

Spread the loveಜೈಪುರ: ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ಇಂದು ಬದುಕಿದ್ದರೆ ಬಿಜೆಪಿಯನ್ನು ಬ್ಯಾನ್ ಮಾಡಿರುತ್ತಿದ್ದರು ಎಂಬ ರಾಜಸ್ಥಾನದ ಮಾಜಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ