Breaking News

ಗೃಹಲಕ್ಷ್ಮಿಗೆ ಮೂರರ ಸಂಭ್ರಮ – ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ ವಿಧಾನಸೌಧ, ಸುವರ್ಣಸೌಧ, ಮೈಸೂರು ಅರಮನೆ

Spread the love

ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿಗೆ  ಮೂರು ವರ್ಷಗಳ ಸಂಭ್ರಮ. ಈ ಸಂಭ್ರಮದ ಸವಿನೆನಪಿಗಾಗಿ ಬೆಂಗಳೂರಿನ ವಿಧಾನಸೌಧ, ಬೆಳಗಾವಿಯ ಸುವರ್ಣಸೌಧ, ಮೈಸೂರು ಅರಮನೆ ಸೇರಿ ಹಲವೆಡೆ ಗುಲಾಬಿ ಬಣ್ಣದ ಲೈಟ್‌ಗಳು(P ಕಂಗೊಳಿಸಲಿವೆ.

ಬೆಂಗಳೂರಿನ ವಿಧಾನಸೌಧ, ಬೆಳಗಾವಿಯ ಸುವರ್ಣಸೌಧ, ಮೈಸೂರು ಅರಮನೆ, ಚಿತ್ರದುರ್ಗದ ಕಲ್ಲಿನಕೋಟೆ, ಹಂಪಿಯ ಕಲ್ಲಿನರಥ, ಮಂಗಳೂರಿನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಕಟ್ಟಡ, ಬೆಳಗಾವಿ ಕಿತ್ತೂರು ಚೆನ್ನಮ್ಮ ವೃತ್ತ ಇವೆಲ್ಲವೂ ಭಾನುವಾರ (ಆ.30) ಸಂಜೆ 6ರಿಂದ ರಾತ್ರಿ 10ರವರೆಗೆ ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ.

ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಪ್ರತಿ ಮನೆಯ ಯಜಮಾನಿಗೆ ಪ್ರತಿ ತಿಂಗಳು 2,000 ರೂ. ನೀಡುವ ಮೂಲಕ ಮಹಿಳೆಯರು ಸ್ವಾವಲಂಬಿ ಜೀವನ ರೂಪಿಸಿಕೊಳ್ಳಲು ನೆರವಾಗಿರುವ ಗೃಹಲಕ್ಷ್ಮೀ ಯೋಜನೆ ಜಾರಿಗೆ ಬಂದು ಇದೇ ಆ.30ಕ್ಕೆ ಮೂರು ವರ್ಷಗಳನ್ನು ಪೂರೈಸಲಿದೆ.

ಸರ್ಕಾರವು ಗೃಹಲಕ್ಷ್ಮೀ ಯೋಜನೆ ಮೂರು ವರ್ಷಗಳನ್ನು ಪೂರೈಸುತ್ತಿರುವ ಈ ಸುಸಂದರ್ಭದಲ್ಲಿ ಮಹಿಳೆಯರ ಹೆಮ್ಮೆಯ ಸಂಕೇತವೆಂದು ಗುರುತಿಸಿರುವ ಗುಲಾಬಿ (PINK) ಬಣ್ಣದ ಬೆಳಕಿನ ವ್ಯವಸ್ಥೆಯನ್ನು ಮಾಡಲಾಗಿದೆ. ಇದುವರೆಗೂ ಸದರಿ ಯೋಜನೆ ಅಡಿ 1.20 ಕೋಟಿ ಫಲನುಭವಿಗಳ ಖಾತೆಗೆ 76,500 ಕೋಟಿ ರೂ.ಗೂ ಹೆಚ್ಚು ಹಣ ಪಾವತಿಸಲಾಗಿದೆ.


Spread the love

About Laxminews 24x7

Check Also

ಗ್ಯಾನೇಂದ್ರ ಬೆನ್ನಲ್ಲೇ ಸಿಐಡಿ ಮತ್ತೊಂದು ಬೇಟೆ – ಸಹಾಯ ಮಾಡಿದ್ದ ಮಧ್ಯವರ್ತಿ ವಶಕ್ಕೆ

Spread the loveಬೆಂಗಳೂರು: ಕೆಪಿಎಸ್‌ಸಿ ಹಗರಣದಲ್ಲಿ ಐಎಎಸ್‌ ಅಧಿಕಾರಿ ಗ್ಯಾನೇಂದ್ರ ಕುಮಾರ್ ಬಂಧನದ ಬೆನ್ನಲ್ಲೇ ಇದೀಗ ಸಿಐಡಿ ತಂಡ ಮತ್ತೊಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ