Breaking News

ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಗ್ಯಾರಂಟಿ ಅನುಷ್ಠಾನ ಸಮಿತಿ ಶಿಫಾರಸು

Spread the love

ಬೆಂಗಳೂರು: ರಾಜ್ಯದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬೆನ್ನಲ್ಲೇ ಇದೀಗ ಬಸ್ ಟಿಕೆಟ್ ದರ ಹೆಚ್ಚಳ ಮಾಡಲು ಗ್ಯಾರಂಟಿ ಅನುಷ್ಠಾನ ಸಮಿತಿಯು ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಶುಕ್ರವಾರ (ಜೂ.19) ನಡೆದ ಗ್ಯಾರಂಟಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಶಿಫಾರಸು ಮಾಡಿದ್ದಾರೆ. ಶಕ್ತಿ ಯೋಜನೆಯಿಂದ ಉಂಟಾಗಿರುವ ಆರ್ಥಿಕ ಹೊರೆಯನ್ನು ಸರಿದೂಗಿಸಲು ದರ ಹೆಚ್ಚಳ ಅನಿವಾರ್ಯ ಎಂದು ಮುಖ್ಯಮಂತ್ರಿಗಳಿಗೆ ಸಮಿತಿ ಮನವಿ ಮಾಡಿವೆ.

ಶಕ್ತಿ ಯೋಜನೆಯಿಂದಾಗಿ ಸಾರಿಗೆ ಇಲಾಖೆಗೆ ಸದ್ಯ 5,173 ಕೋಟಿ ರೂ.ಗಳ ಬೃಹತ್ ಮೊತ್ತದ ಕೊರತೆ ಎದುರಾಗಿದೆ. ಈ ಕೊರತೆಯ ಹಣವನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಸಾರಿಗೆ ನಿಗಮ ಸರ್ಕಾರವನ್ನು ಒತ್ತಾಯಿಸಿದೆ. ಜೊತೆಗೆ ಸಿಬ್ಬಂದಿ ವೇತನ ಬಾಕಿ ಪಾವತಿಗೆ 1,271 ಕೋಟಿ ರೂ. ಅಗತ್ಯವಿದೆ. ಇದರಲ್ಲಿ 450 ರೂ. ಬಿಡುಗಡೆ ಆಗಿದೆ. ಡಿಸೇಲ್ ದರ ಮತ್ತು ಸಿಬ್ಬಂದಿಯ ವೆಚ್ಚ ಹೆಚ್ಚಳವಾಗಿದೆ. 2025ರ ಜನವರಿ 5ರಂದು ಪ್ರಯಾಣ ದರ ಹೆಚ್ಚಳ ಮಾಡಲಾಗಿದೆ. ಹೀಗಾಗಿ ಪ್ರಯಾಣದ ದರ ಹಚ್ಚಳಕ್ಕೆ ಅನುಮತಿಕೊಡಿ ಎಂದಿದೆ.

ಶಕ್ತಿ ಯೋಜನೆ: ಮೇ ಅಂತ್ಯದವರೆಗೆ 763 ಕೋಟಿ ಮಹಿಳೆಯರು ಯೋಜನೆಯ ಫಲಾನುಭವಿಗಳಾಗಿದ್ದು, ಅವರಿಗೆ ವಿನಿಯೋಗಿಸಲಾದ ಟಿಕೆಟ್ ಮೌಲ್ಯ 20047.69 ಕೋಟಿ ರೂ. 2026-27ನೇ ಸಾಲಿಗೆ ಸಾಮಾನ್ಯ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಎಲ್ಲರನ್ನೂ ಸೇರಿಸಿ 10 ಲಕ್ಷ ಉಚಿತ ಬಸ್ ಪಾಸ್‌ಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲು ಅಂದಾಜಿಸಲಾಗಿದೆ.

ಗೃಹಜ್ಯೋತಿ ಯೋಜನೆ: ಮೇ ಅಂತ್ಯದವರೆಗೆ 1.65 ಕೋಟಿ ಫಲಾನುಭವಿಗಳು ಯೋಜನೆಯ ಲಾಭ ಪಡೆದಿದ್ದಾರೆ. ಹೊರ ರಾಜ್ಯದಿಂದ ಇಲ್ಲಿಗೆ ಬಂದು ನೆಲೆಸಿ ಗೃಹಜ್ಯೋತಿ ಲಾಭ ಪಡೆಯುತ್ತಿರುವವರ ಮಾಹಿತಿ ಸಂಗ್ರಹಿಸಲು ಸೂಚನೆ ನೀಡಲಾಗಿದೆ. ಮತಪಟ್ಟಿಯಲ್ಲಿ ಹೆಸರಿರುವ ಮತದಾರರು ಮಾತ್ರ ಸರ್ಕಾರದ ಯೋಜನೆಗಳ ಫಲಾನುಭವಿಗಳಾಗಿರುತ್ತಾರೆ. ಆದ್ದರಿಂದ ವಿಶೇಷ ಸಮಗ್ರ ಪರಿಷ್ಕರಣೆ ಸಂದರ್ಭದಲ್ಲಿ ಫಲಾನುಭವಿಗಳು ತಮ್ಮ ಹೆಸರು ಬಿಟ್ಟು ಹೋಗದಂತೆ ನೋಡಿಕೊಳ್ಳಬೇಕು.

ಅನ್ನಭಾಗ್ಯ ಯೋಜನೆ: 11,561 ಕೋಟಿ ರೂ.ಗಳನ್ನು ಡಿಬಿಟಿ ಮೂಲಕ ಫಲಾನುಭವಿಗಳ ಖಾತೆಗೆ ವರ್ಗಾಯಿಸಲಾಗಿದೆ. 2023ರ ಜುಲೈಯಿಂದ 2024ರ ಡಿಸೆಂಬರ್‌ವರೆಗೆ ಒಟ್ಟು 72,02,33,970 ಫಲಾನುಭವಿಗಳಿಗೆ ಒಟ್ಟು 11561.05 ಕೋಟಿ ರೂ.ಯನ್ನು ಡಿಬಿಟಿ ಮೂಲಕ ವರ್ಗಾಯಿಸಲಾಗಿದೆ. ತದನಂತರ 2025ರ ಫೆಬ್ರವರಿ ತಿಂಗಳಿನಿಂದ ಇಲ್ಲಿಯವರೆಗೆ ಪ್ರಸ್ತುತ ರಾಜ್ಯದಲ್ಲಿರುವ ಒಟ್ಟು 4,44,67,942 ಫಲಾನುಭವಿಗಳಿಗೆ ಪ್ರತಿ ತಿಂಗಳು ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿಯಾಗಿ 5 ಕೆ.ಜಿ. ಅಕ್ಕಿಯನ್ನು ವಿತರಿಸಲಾಗುತ್ತಿದೆ. ಕಾಳಸಂತೆಯಲ್ಲಿ ಅನ್ನಭಾಗ್ಯ ಅಕ್ಕಿ ಅಕ್ರಮ ಮಾರಾಟವಾಗುತ್ತಿರುವುದನ್ನು ನಿಗ್ರಹಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಚರ್ಚಿಸಲಾಗಿದೆ.


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ