Breaking News

ಮಂತ್ರಾಲಯದಲ್ಲಿ ಗುರುರಾಘವೇಂದ್ರ ಸ್ವಾಮಿಗಳ ಗುರುವೈಭವೋತ್ಸವ – ರಾಯರ 405ನೇ ಪಟ್ಟಾಭಿಷೇಕ ಮಹೋತ್ಸವ

Spread the love

ರಾಯಚೂರು: ಮಂತ್ರಾಲಯ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ರಾಯರ ಗುರುವೈಭವೋತ್ಸವ ಸಂಭ್ರಮ ಮನೆಮಾಡಿದೆ. ಫೆ.18ರಿಂದ 24ರವರೆಗೆ ಏಳು ದಿನಗಳ ಕಾಲ ರಾಯರ ಪಟ್ಟಾಭಿಷೇಕ, ವರ್ಧಂತಿ ಉತ್ಸವಗಳು ಸೇರಿ ನಾನಾ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ಗುರುವೈಭವೋತ್ಸವಕ್ಕೆ ಇಂದು (ಫೆ.18) ಚಾಲನೆ ಸಿಕ್ಕಿದ್ದು, ನಾಳೆ ಗುರುರಾಘವೇಂದ್ರ ಸ್ವಾಮಿಗಳ 405ನೇ ಪಟ್ಟಾಭಿಷೇಕ ಮಹೋತ್ಸವ ಜರುಗಲಿದೆ. ರಾಘವೇಂದ್ರ ತೀರ್ಥರ ಶಿಷ್ಯ ಯತಿ ಯೋಗಿಂದ್ರ ತೀರ್ಥರ ಪಾರ್ಥನೆಯಂತೆ ಮೂಲ ಪಾದುಕೆಗಳ ಪಟ್ಟಾಭಿಷೇಕ ನೆರವೇರಿಸಲಾಗುತ್ತದೆ. ಮಠದ ಪ್ರಸ್ತುತ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಶ್ರೀಗಳು ರಾಯರ ಮೂಲ ಪಾದುಕೆಗಳಿಗೆ ಪಟ್ಟಾಭಿಷೇಕ ನೆರವೇರಿಸಲಿದ್ದಾರೆ. 

ಇನ್ನೂ ಫೆ.24ರಂದು ರಾಯರ 431ನೇ ಜನ್ಮದಿನವನ್ನ ವರ್ಧಂತಿ ಉತ್ಸವವಾಗಿ ಮಠದಲ್ಲಿ ಅದ್ದೂರಿಯಾಗಿ ಆಚರಿಸಲಾಗುತ್ತದೆ. ಈ ಏಳು ದಿನಕಾಲ ಧಾರ್ಮಿಕ ಕಾರ್ಯಕ್ರಮಗಳ ಜೊತೆ ಪ್ರತಿ ದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು, ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಸನ್ಮಾನ ಮಾಡಲಾಗುತ್ತದೆ.


Spread the love

About Laxminews 24x7

Check Also

ಮಂತ್ರಾಲಯ ರಾಯರ ಮಠದ ಹುಂಡಿ ಎಣಿಕೆ ಮುಕ್ತಾಯ – 21 ದಿನದಲ್ಲಿ 3.08 ಕೋಟಿ ರೂ. ಸಂಗ್ರಹ

Spread the loveರಾಯಚೂರು: ಕಲಿಯುಗ ಕಾಮಧೇನು ಮಂತ್ರಾಲಯದ ) ಶ್ರೀ ರಾಘವೇಂದ್ರ ಸ್ವಾಮಿ  ಮಠದ ಹುಂಡಿ ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ