Breaking News

ಕಾಂಗ್ರೆಸ್ ಆರೋಪಕ್ಕೆ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟನೆ

Spread the love

ಪರಿಷತ್ ಚುನಾವಣೆಗೆ ಜೆಡಿಎಸ್ ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಆಪರೇಷನ್ ನಡೆಸುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

ಇಂದು ಬೆಂಗಳೂರಿನಲ್ಲಿ ಅವರು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ಜೆಡಿಎಸ್ ಪಕ್ಷ ಇಂತಹ ಯಾವುದೇ ಆಪರೇಷನ್ ನಡೆಸುತ್ತಿಲ್ಲ ಎಂದವರು ಸ್ಪಷ್ಟಪಡಿಸಿದ್ದಾರೆ. ಸರ್ಕಾರ ಅವರ ಕೈಯಲ್ಲಿದೆ. ಮ್ಯಾನ್ ಪವರ್, ಮಸಲ್ ಪವರ್, ಹಣದ ಪವರ್ ಎಲ್ಲಾ ಇಟ್ಕೊಂಡವ್ರೆ. ಅವರ ಮುಂದೆ ನಾವು ಫೈಟ್ ಮಾಡಕ್ಕಾಗುತ್ತಾ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಜೆಡಿಎಸ್ ತನ್ನ ಪಕ್ಷದ ಮತಗಳು ಚಲ್ಲಾಪಿಲ್ಲಿ ಆಗಬಾರದು, ಒಟ್ಟಾಗಿರಬೇಕು ಎಂಬ ಉದ್ದೇಶದಿಂದಲೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಗೆಲ್ಲುವ ಉದ್ದೇಶದಿಂದ ಕುತಂತ್ರದ ಮಾರ್ಗ ಅನುಸರಿಸುವ ಪ್ರಶ್ನೆಯೇ ಇಲ್ಲ. ನಮ್ಮ ಅಭ್ಯರ್ಥಿ ಆತ್ಮಸಾಕ್ಷಿ ಮತವನ್ನು ನೀಡುವಂತೆ ಮನವಿ ಮಾಡಿದ್ದಾರೆ. ಅಲ್ಲದೆ, ಸರ್ಪ್ಲಸ್ ಮತಗಳ ಬೆಂಬಲಕ್ಕಾಗಿ ಬಿಜೆಪಿ ನಾಯಕರಿಗೆ ಮನವಿ ಮಾಡಲಾಗಿದೆ. ಇದು ನಮ್ಮ ಮತಗಳನ್ನು ಭದ್ರವಾಗಿ ಇಟ್ಟುಕೊಳ್ಳುವ ಸಲುವಾಗಿ ಮಾಡಿದ ಪ್ರಯತ್ನವಷ್ಟೇ ಎಂದವರು ತಿಳಿಸಿದ್ದಾರೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ