Breaking News

ಚುನಾವಣಾ ರಾಜಕೀಯಕ್ಕೆ ಹೆಚ್ ವಿಶ್ವನಾಥ್ ಗುಡ್ ಬೈ

Spread the love

ಮೈಸೂರು: ಮುಂಬರುವ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳುವ ಮೂಲಕ ಎಂಎಲ್‌ಸಿ ಹೆಚ್ ವಿಶ್ವನಾಥ್ ಚುನಾವಣಾ ರಾಜಕೀಯಕ್ಕೆ ಗುಡ್ ಬೈ ಹೇಳಿದ್ದಾರೆ.

ಈ ಕುರಿತು ಮೈಸೂರಿನಲ್ಲಿ  ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಹಲವು ಬಾರಿ ಚುನಾವಣೆ ಎದುರಿಸಿದಾಗ ಜನರೇ ಹಣ ನೀಡಿ ಆಶೀರ್ವಾದ ಮಾಡಿದ್ದರು. ಆದರೆ ಈಗ ಹಣ ನೀಡಿ ಚುನಾವಣೆ ಎದುರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ವಿಧಾನಸಭೆ ಚುನಾವಣೆ ಎದುರಿಸಲು 50 ಕೋಟಿ ರೂ. ಹಣ ಬೇಕು. ರಿಯಲ್ ಎಸ್ಟೇಟ್ ನಡೆಸುವವರು ನಿವೇಶನಗಳನ್ನಾದರೂ ಮಾರಾಟ ಮಾಡಿ ಚುನಾವಣೆ ಎದುರಿಸುತ್ತಾರೆ. ನನಗೆ ಒಂದು ಮನೆ ಒಂದು ನಿವೇಶನ ಮಾತ್ರ ಇವೆ. 50 ಕೋಟಿ ರೂ. ಖರ್ಚು ಮಾಡಿ ಚುನಾವಣೆ ಎದುರಿಸುವಷ್ಟು ಶಕ್ತಿ ಈಗ ನನ್ನಲ್ಲಿ ಇಲ್ಲ ಎಂದರು.

ನನ್ನ ಮಕ್ಕಳು ಕೂಡ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಅವರ ಶಕ್ತಾನುಸಾರ ರಾಜಕೀಯದಲ್ಲಿ ಮುಂದುವರಿಯುತ್ತಾರೆ. ನಾನು ಸಹ ರಾಜಕೀಯದಲ್ಲಿ ಮುಂದುವರಿಯುತ್ತೇನೆ, ಆದರೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ತಿಳಿಸಿದರು.


Spread the love

About Laxminews 24x7

Check Also

ತಿರಂಗ ಯಾತ್ರೆಯಲ್ಲಿ ಗಮನ ಸೆಳೆದ ಈಸೂರು ದಂಗೆಯ ಸ್ತಬ್ಧಚಿತ್ರ

Spread the loveಶಿವಮೊಗ್ಗ: ನಗರದ  ಶೀನಪ್ಪಶೆಟ್ಟಿ ವೃತ್ತದಲ್ಲಿ ಸ್ವಾತಂತ್ರ್ಯೋತ್ಸವ  ಅಂಗವಾಗಿ ಬಿಜೆಪಿ ವತಿಯಿಂದ ರಾಮಣ್ಣಶ್ರೇಷ್ಟಿ ಪಾರ್ಕ್‌ನಿಂದ ಗೋಪಿ ವೃತ್ತದವರೆಗೆ ತಿರಂಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ