Breaking News

ಬೆಂಗಳೂರಲ್ಲಿ ಆಲಿಕಲ್ಲು ಮಳೆ, ಗಾಳಿ ಅಬ್ಬರ – ವಿಧಾನಸೌಧಕ್ಕೂ ನುಗ್ಗಿದ ನೀರು

Spread the love

ಬೆಂಗಳೂರು: ಬಿಸಿಲಿನಿಂದ ಕಾದು ಕೆಂಡವಾಗಿದ್ದ ಬೆಂಗಳೂರಿನ  ಹಲವೆಡೆ ಬುಧವಾರ (ಇಂದು) ಸಂಜೆ ಆಲಿಕಲ್ಲು, ಭಾರೀ ಗಾಳಿ ಸಹಿತ ಮಳೆಯಾಗಿದೆ. ಇದರಿಂದ ಬಿಸಿಲ ಬೇಗೆಗೆ ಬಸವಳಿದಿದ್ದ ಬೆಂಗಳೂರಿನ ಜನತೆ ನಿಟ್ಟುಸಿರು ಬಿಡುವಂತಾಗಿದೆ.

ಹವಾಮಾನ ಇಲಾಖೆಯು ಏಪ್ರಿಲ್ 29 ಮತ್ತು 30 ರಂದು ಬೆಂಗಳೂರು ಸೇರಿದಂತೆ ಕರ್ನಾಟಕ  ರಾಜ್ಯದ ವಿವಿಧೆಡೆ ಮಳೆಯಾಗುವುದಾಗಿ ಸೂಚನೆ ನೀಡಿತ್ತು. ಜೊತೆ ಆರೆಂಟ್ ಅಲರ್ಟ್ ಸಹ ಮಾಡಿತ್ತು. ಅಂತೆಯೇ ಇದೀಗ ಬೆಂಗಳೂರು ಸುತ್ತಮುತ್ತ ಮಳೆಯಾಗಿರುವುದರಿಂದ ವಾತಾವರಣ ತಂಪಾಗಿದೆ. ಮಂಗಳವಾರ ಸಂಜೆ ಸಹ ನಗರದ ಹೃದಯ ಭಾಗದಲ್ಲಿ ಭಾರೀ ಮಳೆಯಾಗಿದೆ. ಆದರೆ ಅನಿರೀಕ್ಷಿತ ಮಳೆಯಿಂದಾಗಿ ಅಲ್ಲಲ್ಲಿ ಟ್ರಾಫಿಕ್ ಜಾಮ್  ಉಂಟಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.

ಎಲ್ಲೆಲ್ಲಿ ಮಳೆ?
ಶಾಂತಿನಗರ, ಲಾಲ್ಬಾಗ್‌, ವಿಲ್ಸನ್ ಗಾರ್ಡನ್, ಕಾರ್ಪೋರೇಶನ್, ಜಯನಗರ, ಚಿನ್ನಸ್ವಾಮಿ, ಮಹಾತ್ಮ ಗಾಂಧಿ ರಸ್ತೆ, ಹಲಸೂರು, ವಿಧಾನಸೌಧ, ಶಿವಾಜಿನಗರ, ರೇಸ್ ಕೋರ್ಸ್ ರಸ್ತೆ, ಮೆಜೆಸ್ಟಿಕ್, ಶಿವಾನಂದ ಸರ್ಕಲ್, ಮಲ್ಲೇಶ್ವರಂ, ಜಯನಗರ, ಜೆಪಿ ನಗರ, ಬಸವನಗುಡಿ ಮೊದಲಾದೆಡೆ ಗಾಳಿಯಿಂದ ಕೂಡಿದ ಆಲಿಕಲ್ಲು ಮಳೆ ಸುರಿದಿದೆ. ಟ್ರಿನಿಟಿ ಸರ್ಕಲ್ ಬಳಿ ಆಲಿಕಲ್ಲು ಮಳೆಯಾಗಿದೆ.

ಅಲ್ಲದೇ ಯಲಹಂಕ, ವಿದ್ಯಾರಣ್ಯಪುರ, ಜಾಲಹಳ್ಳಿ ಸೇರಿದಂತೆ ಬಹುತೇಕ ಕಡೆ ಮೋಡ ಕವಿದ ವಾತಾವರಣವಿದ್ದು ಗುಡುಗು ಸಹಿತ ಮಳೆ ನಿರೀಕ್ಷಿಸಲಾಗಿದೆ. ಏಕಾಏಕಿ ಸುರಿದ ಮಳೆಯಿಂದಾಗಿ ನಗರದ ಕೆಲೆವೆಡೆ ವಾಹನ ಸಂಚಾರದಲ್ಲಿ ವ್ಯತ್ಯಯ ಆಯಿತು. ಹೀಗಾಗಿ ಸಂಜೆ ವೇಳೆ ಮನೆ ಕಡೆ ತೆರಳುತ್ತಿದ್ದವರು ಟ್ರಾಫಿಕ್ ನಲ್ಲಿ ಸಿಲುಕಿ ಸಂಕಷ್ಟ ಎದುರಿಸಿದರು.

ಆರ್‌. ಅಶೋಕ್‌ ಕಚೇರಿಗೆ ನುಗ್ಗಿದ ನೀರು
ಇನ್ನೂ ಬೆಂಗಳೂರಿನಲ್ಲಿ ಸುರಿದ ಭಾರೀ ಗಾಳಿ ಸಹಿತ ಮಳೆಯಿಂದ ವಿಧಾನಸೌಧಕ್ಕೂ ನೀರು ನುಗ್ಗಿದೆ. ವಿಧಾನ ಸೌಧದಲ್ಲಿ ವಿಪಕ್ಷ ನಾಯಕ ಆರ್‌. ಅಶೋಕ್‌ ಅವರ ಕೊಠಡಿಗೆ ನೀರು ನುಗ್ಗಿದೆ. ದ್ವಾರದ ಮೂಲಕವೇ ನೀರು ನುಗ್ಗಿದ್ದು, ಕಚೇರಿಯಲ್ಲಿ ಹಲವು ವಸ್ತುಗಳು ಹಾನಿಯಾಗಿವೆ.


Spread the love

About Laxminews 24x7

Check Also

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the loveದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ