ಹಾಸನ: ಈ ಬಾರಿಯ ಹಾಸನಾಂಬಾ ಜಾತ್ರಾ ಮಹೋತ್ಸವ ಅ.29ರಿಂದ ನವೆಂಬರ್ 11ರವರೆಗೆ ನಡೆಯಲಿದ್ದು, ಶ್ರದ್ಧಾ, ಭಕ್ತಿ, ಸಡಗರ, ಸಂಭ್ರಮದಿಂದ ಆಚರಿಸಲು ಜಿಲ್ಲಾಡಳಿತ ಸಜ್ಜಾಗಿದೆ.
ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಬಾರಿ ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ ನಡೆಯಲಿದೆ. ಅ.29ರಂದು ಗುರುವಾರ ಮ.12 ಗಂಟೆಗೆ ಹಾಸನಾಂಬ ದೇವಾಲಯದ ಗರ್ಭಗುಡಿ ಬಾಗಿಲು ತೆರೆಯಲಿದೆ. ಅದು ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಮಾರನೇ ದಿನ ಅ.3ರಿಂದ ನ.10ರವರೆಗೆ ಅಂದರೆ 12 ದಿನಗಳ ಕಾಲ ದೇವಿ ದರ್ಶನಕ್ಕೆ ಅವಕಾಶವಿರುತ್ತದೆ. ನ.11ರಂದು ಶಾಸ್ತ್ರೋಕ್ತವಾಗಿ ಗರ್ಭಗುಡಿ ಬಾಗಿಲು ಬಂದ್ ಆಗಲಿದೆ.
ಹಾಸನಾಂಬಾ ಜಾತ್ರಾ ಮಹೋತ್ಸವಕ್ಕಾಗಿ ಸೆ.26ರಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ.ಶಿವಲಿಂಗೇಗೌಡ ಅವರು ಪೋಸ್ಟರ್ ಬಿಡುಗಡೆ, ವೆಬ್ಸೈಟ್ ಲಾಂಚ್ ಮಾಡಲಿದ್ದಾರೆ. ಈ ಬಾರಿ ಹಾಸನ ಜಿಲ್ಲೆಯ ಏಳು ತಾಲೂಕುಗಳನ್ನು ಬರ ತಾಲೂಕುಗಳು ಎಂದು ಘೋಷಿಸಲಾಗಿದೆ. ಹೀಗಾಗಿ ಬರದ ಛಾಯೆಯ ನಡುವೆಯೂ ಅದ್ದೂರಿಯಾಗಿ ಅಲ್ಲದಿದ್ದರೂ ಶ್ರದ್ಧಾ, ಭಕ್ತಿ, ಸಡಗರದಿಂದ ಜಾತ್ರಾ ಮಹೋತ್ಸವ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಈಗಾಗಲೇ ಅನೇಕ ಸಮಿತಿಗಳನ್ನು ರಚಿಸಲಾಗಿದೆ. ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲು ಸಿದ್ದತೆ ನಡೆಸಿದ್ದೇವೆ. ಆಹಾರ ಮೇಳ, ಚಿತ್ರಸಂತೆ, ಸಾಂಸ್ಕೃತಿಕ, ಸಾಹಿತ್ಯ ವೈಭವವನ್ನು ಜನತೆಗೆ ತಲುಪಿಸಲು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದಿದ್ದಾರೆ.
Laxmi News 24×7