Breaking News

ಸಾರಿಗೆ ಬಸ್, ಪಿಕಪ್ ವಾಹನದ ನಡುವೆ ಭೀಕರ ಅಪಘಾತ – ಓರ್ವ ಸಾವು, ನಾಲ್ವರಿಗೆ ಗಾಯ

Spread the love

ಹಾಸನ: ಸಾರಿಗೆ ಬಸ್ ಹಾಗೂ ಬೊಲೆರೋ ಪಿಕಪ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದು, ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ಹಾಸನ  ಜಿಲ್ಲೆ, ಸಕಲೇಶಪುರ ತಾಲೂಕಿನ ಮಾರನಹಳ್ಳಿ ಸಮೀಪ ನಡೆದಿದೆ.

ದಿನೇಶ್ (38) ಸ್ಥಳದಲ್ಲೇ ಸಾವನ್ನಪ್ಪಿದ ವ್ಯಕ್ತಿ. ಸುಬ್ರಮಣ್ಯ, ವೆಂಕಟರಮಣ, ಜಿತೇಂದ್ರ ಹಾಗೂ ದುರ್ಗಾಪ್ರಸಾದ್ ಘಟನೆಯಲ್ಲಿ ಗಾಯಗೊಂಡಿದ್ದಾರೆ. ಐಸಿಐಸಿಐ ಬ್ಯಾಂಕ್‌ಗೆ ಸೇರಿದ ಬೊಲೆರೋ ಪಿಕಪ್ ವಾಹನ ಎಟಿಎಂಗಳಿಗೆ ಹಣ ತುಂಬಲು ಬರುತ್ತಿತ್ತು. ಈ ವೇಳೆ ಮಂಗಳೂರಿನಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಪಿಕಪ್ ನಡುವೆ ಅಪಘಾತ ಸಂಭವಿಸಿದೆ.

ಗಾಯಾಳುಗಳು ಕೊಡಗು ಹಾಗೂ ಮಂಗಳೂರು ಮೂಲದವರು. ಸದ್ಯ ಗಾಯಾಳುಗಳಿಗೆ ಸಕಲೇಶಪುರ ಕ್ರಾಫರ್ಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ ಪ್ರಕರಣ – ಶಾಸಕ ಸುರೇಶ್‌ಗೌಡ ಪುತ್ರಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Spread the loveಮಂಡ್ಯ: ಕರ್ತವ್ಯನಿರತ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಾಸಕ ಸುರೇಶ್‌ಗೌಡ ಅವರ ಪುತ್ರಿ ಐಶ್ವರ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ