Breaking News

ಹಾಸನದಲ್ಲಿ ರೌಡಿಶೀಟರ್‌ನ ಬರ್ಬರ ಹತ್ಯೆ – ದುಷ್ಕರ್ಮಿಗಳು ಎಸ್ಕೇಪ್‌

Spread the love

ಹಾಸನ: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನ ಬರ್ಬರವಾಗಿ ಹತ್ಯೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಹಾಸನದಲ್ಲಿ  ನಡೆದಿದೆ.

ಹಾಸನ ನಗರದ ಚನ್ನಪಟ್ಟಣದಲ್ಲಿರುವ ಜಿಲ್ಲಾ ಕೋರ್ಟ್ ಮುಂಭಾಗ ಇಂದು ಮುಂಜಾನೆ ಘಟನೆ ನಡೆದಿದೆ. ಮಂಜೇಶ್ (43) ಕೊಲೆಯಾದ ರೌಡಿಶೀಟರ್.

ಮಂಜೇಶ್ ತಾಯಿ ಹಾಸನ ಮೂಲದವರಾಗಿದ್ದು, ಬೆಂಗಳೂರಿನಲ್ಲಿ ನೆಲೆಸಿದ್ದರು. ಬೆಂಗಳೂರಿನಲ್ಲಿ ರೌಡಿಶೀಟರ್ ಆಗಿರುವ ಮಂಜೇಶ್ ಹಾಸನಕ್ಕೆ ಬಂದಿದ್ದ ವೇಳೆ ಹಂತಕರು ಮಾರಕಾಸ್ತ್ರಗಳನ್ನ ಹಿಡಿದು ದಾಳಿ ನಡೆಸಿದ್ದು ಮುಖದ ಗುರುತು ಸಿಗದಂತೆ ಕೊಚ್ಚಿ ಕೊಲೆಗೈದು ಎಸ್ಕೇಪ್ ಆಗಿದ್ದಾರೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಹಾಸನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ