ಹಾಸನ: ಕೊರೊನಾ ವಿರುದ್ಧ ಹೋರಾಟಕ್ಕೆ ಹಗಲಿರುಳು ಶ್ರಮಿಸುತ್ತಿರುವ ಪೊಲೀಸರ ಜೊತೆ ಸದಾ ನಾವಿದ್ದೇವೆ ಎಂದು ಎಂಎಲ್‍ಸಿ ಗೋಪಾಲಸ್ವಾಮಿ ಪೊಲೀಸರೊಂದಿಗೆ ಲಾಠಿ ಹಿಡಿದು ಸ್ವಲ್ಪ ಸಮಯ ಕೆಲಸ ನಿರ್ವಹಿಸಿದ್ದಾರೆ.
ಚನ್ನರಾಯಪಟ್ಟಣದಲ್ಲಿ ಪೊಲೀಸರು ಲಾಕ್ ಡೌನ್ ಬಂದೋಬಸ್ತ್ ನಲ್ಲಿ ಬ್ಯುಸಿಯಾಗಿದ್ರು. ಅದೇ ಸಮಯಕ್ಕೆ ಬಂದ ಎಂಎಲ್‍ಸಿ ಗೋಪಾಲಸ್ವಾಮಿ, ಕರ್ತವ್ಯ ನಿರತ ಪೊಲೀಸರ ಯೋಗಕ್ಷೇಮ ವಿಚಾರಿಸಿದ್ರು.
ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದರೂ ಕೆಲವರು ಅನಗತ್ಯವಾಗಿ ವಾಹನಗಳಲ್ಲಿ ಓಡಾಡ್ತಿದ್ದರು. ಇದನ್ನು ನೋಡಿ ಹಗಲಿರುಳು ನಮಗಾಗಿ ಸೇವೆ ಸಲ್ಲಿಸುತ್ತಿರುವ ಪೊಲೀಸರ ಜೊತೆ ನಾವಿದ್ದೇವೆ ಎಂದು ಕೃತಜ್ಞತೆ ಸಲ್ಲಿಸುವ ಸಲುವಾಗಿ ಎಂಎಲ್‍ಸಿ ಗೋಪಾಲಸ್ವಾಮಿ ಸ್ವತಃ ಪೊಲೀಸ್ ಲಾಠಿ ಹಿಡಿದ ಕೆಲಸಕ್ಕೆ ನಿಂತ್ರು.
ಎಷ್ಟು ಹೇಳಿದರೂ ಪದೇ ಪದೇ ಅನಗತ್ಯವಾಗಿ ವಾಹನದಲ್ಲಿ ಓಡಾಡುತ್ತಿದ್ದವರಿಗೆ ಅನಾವಶ್ಯಕವಾಗಿ ಓಡಾಡದಂತೆ ಮನವರಿಕೆ ಮಾಡಿದರು. ಎಂಎಲ್‍ಸಿಯೇ ಜೊತೆಗೆ ನಿಂತಾಗ ಪೊಲೀಸರೂ ಉತ್ಸಾಹದಿಂದ ಕಾರ್ಯ ನಿರ್ವಹಿಸಿದರು. ಈ ಸಂದರ್ಭದಲ್ಲಿ ಸರ್ಕಲ್ ಇನ್ಸ್ ಪೆಕ್ಟರ್ ಕುಮಾರ್, ಸಬ್ ಇನ್ಸ್ ಪೆಕ್ಟರ್ ಕಿರಣ್ ಹಾಜರಿದ್ದರು.