Breaking News

ಬೆಂಗಳೂರಿನ ಇನ್ಫೋಸಿಸ್ ಫೌಂಡೇಶನ್ ವತಿಯಿಂದ ಇಂದು ಪೌರಕಾರ್ಮಿಕರಿಗೆ ಆಹಾರ ಕಿಟ್ ವಿತರಿಸಲಾಯಿತು.

Spread the love

ಹುಬ್ಬಳ್ಳಿ: ಬೆಂಗಳೂರಿನ ಇನ್ಫೋಸಿಸ್ ಫೌಂಡೇಶನ್ ವತಿಯಿಂದ ಇಂದು ಪೌರಕಾರ್ಮಿಕರಿಗೆ ಆಹಾರ ಕಿಟ್ ವಿತರಿಸಲಾಯಿತು.

ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗ ತಡೆಗಟ್ಟುವ ನಿಟ್ಟಿನಲ್ಲಿ ಸ್ವಚ್ಛತಾ ಸೇನಾನಿಗಳಂತೆ ಕಾರ್ಯನಿರ್ವಹಿಸುತ್ತಿರುವ (Frontline workers) ಪಾಲಿಕೆಯ ಪೌರಕಾರ್ಮಿಕರು, ಆಟೋ ಟಿಪ್ಪರ್ ಚಾಲಕರು ಮತ್ತು ಸಹಾಯಕರು, ಟ್ರ್ಯಾಕ್ಟರ್ ಡ್ರೈವರ್‍ಗಳು, ಲೋಡರ್ಸ್, ಜೆಟ್ಟಿಂಗ್ ಯಂತ್ರದ ಸಿಬ್ಬಂದಿಗೆ 2,800 ಆಹಾರ ಸಾಮಗ್ರಿಗಳ ಕಿಟ್ ವಲಯವಾರು ವಿತರಿಸಲಾಯಿತು.

ಕಿಟ್ 5 ಕೆ.ಜಿ ಅಕ್ಕಿ, 1ಕೆ.ಜಿ ತೊಗರಿ ಬೇಳೆ, 1 ಲೀಟರ್ ಎಣ್ಣೆ, ಮಸಾಲೆ ಪದಾರ್ಥಗಳು, ಅರ್ಧ ಕೆಜಿ ಕಡಲೆಬೇಳೆ ಸೇರಿದಂತೆ ಹತ್ತು ಪದಾರ್ಥಗಳನ್ನು ಒಳಗೊಂಡಿರುತ್ತದೆ. ಈ ಆಹಾರ ಪದಾರ್ಥಗಳ ಕಿಟ್ ಗಳನ್ನು ಪಾಲಿಕೆಯ ಆಯುಕ್ತರಾದ ಡಾ.ಸುರೇಶ್ ಬಿ ಇಟ್ನಾಳ ರವರಿಗೆ ಇನ್ಫೋಸಿಸ್ ಫೌಂಡೇಶನ್ನಿನ ಅಮೋಲ್ ಕುಲಕರ್ಣಿ ಹಸ್ತಾಂತರಿಸಿದರು.

ಇನ್ಫೋಸಿಸ್ ಫೌಂಡೇಶನ್ ನೆರವಿನ ಕುರಿತು ಹಾಗೂ ಸಮಾಜಮುಖಿ ಕಾರ್ಯಗಳ ಕುರಿತು ಪಾಲಿಕೆಯ ಆಯುಕ್ತರು ಮುಕ್ತಕಂಠದಿಂದ ಶ್ಲಾಘನೆ ಮಾಡಿದರು. ಈ ಸಂಧರ್ಭದಲ್ಲಿ ಪಾಲಿಕೆಯ ಜಂಟಿ ಆಯುಕ್ತರಾದ ಅಜೀಜ್ ದೇಸಾಯಿ, ಘನತ್ಯಾಜ್ಯವಸ್ತು ನಿರ್ವಹಣೆ ವಿಭಾಗದ ಕಾರ್ಯಪಾಲಕ ಅಭಿಯಂತರ ವಿಜಯಕುಮಾರ್, ಪಾಲಿಕೆ ಸಿಬ್ಬಂದಿ, ಇನ್ಫೋಸಿಸ್ ಫೌಂಡೇಶನ್ ಸಿಬ್ಬಂದಿ ಹಾಜರಿದ್ದರು.


Spread the love

About Laxminews 24x7

Check Also

ಬೈಲಹೊಂಗಲ | ಬೆಂಕಿ ಅವಘಡ: ಸುಟ್ಟು ಕರಕಲಾದ ಬಣವೆ

Spread the love ಬೈಲಹೊಂಗಲ: ಆಕಸ್ಮಿಕವಾಗಿ ಬೆಂಕಿ ತಗುಲಿದ್ದರಿಂದ ಸೋಯಾಬೀನ್ ಕಾಳಿನ ಬಣವೆ ಸುಟ್ಟು ಕರಕಲಾದ ಘಟನೆ ತಾಲ್ಲೂಕಿನ ದೊಡವಾಡ ಗ್ರಾಮದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ