ಹುಬ್ಬಳ್ಳಿ, ಮೇ 26- ಪ್ರಯಾಣಿಕರು ಮತ್ತು ವಾಣಿಜ್ಯೊದ್ಯಮ ಚಟುವಟಿಕೆ ಗಳನ್ನು ಉತ್ತೆಜಿಸಲು ನಿನ್ನೆಯಿಂದ ಬೆಂಗಳೂರು-ಹುಬ್ಬಳ್ಳಿ ನಡುವೆ ಪ್ರಯಾಣಿಕರ ವಿಮಾನಯಾನ ಪ್ರಾರಂಭವಾಗಿದ್ದು ಕೇವಲ 30 ಜನ ಪ್ರಯಾಣಿಸಿದ್ದಾರೆ.
ಎರಡು ತಿಂಗಳ ನಂತರ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸ್ಟಾರ್ ಏರಲೈನ್ಸ್ ವಿಮಾನಕ್ಕೆ ಪ್ರಯಾಣಿಕರಿಂದ ದೊಡ್ಡ ಪ್ರಮಾಣದ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ಬೆಂಗಳೂರಿನಿಂದ ಹುಬ್ಬಳ್ಳಿಗೆ ಕೇವಲ ನಾಲ್ಕು ಜನ ಪ್ರಯಾ ಣಿಕರು ಆಗಮಿಸಿದರೆ, ಹುಬ್ಬಳ್ಳಿಯಿಂದ ಬೆಂಗಳೂರಿಗೆ 30 ಜನ ಪ್ರಯಾಣ ಮಾಡಿದ್ದಾರೆ.
ಹುಬ್ಬಳ್ಳಿಗೆ ಆಗಮಿಸಿದ ಹಾಗೂ ಬೆಂಗಳೂರಿಗೆ ತೆರಳಿದ ಪ್ರಯಾಣಿಕರಿಗೆ ಸಾಮಾಜಿಕ ಅಂತರ ನಿಯಮದೊಂದಿಗೆ ನಿಲ್ದಾಣದಲ್ಲಿಯೇ ವೈದ್ಯಕೀಯ ಪ್ರಮಾಣ ಪತ್ರ ಪರಿಶೀಲಿಸಲಾ ಯಿತಲ್ಲದೇ, ಥರ್ಮಲ್ ಸ್ಕ್ರೀನಿಂಗ್ ಮಾಡಲಾಯಿತು. ನಿಗದಿ ಪಡಿಸಿದ ಕ್ವಾರಂಟೈನ್ ಕೇಂದ್ರಗಳಿಗೆ ತೆರಳುವಂತೆ ಸೂಚಿಸಲಾಯಿತು.
ಪ್ರತ್ಯೇಕ ಕೌಂಟರ್ ಸ್ಥಾಪನೆ:ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿದೇಶದ ಒಳನಾಡು ವಿಮಾನಗಳ ಪ್ರಯಾಣಿಕರ ಆಗಮನ ಮತ್ತು ನಿರ್ಗಮನಕ್ಕೆ ಪ್ರತ್ಯೆಕ ಕೌಂಟರ್ ಸ್ಥಾಪಿಸಲಾಗಿದೆ. ಈ ಕೌಂಟರ್‍ನಲ್ಲಿಪ್ರಮಾಣ ಪತ್ರಗಳ ಪರಿಶೀಲನೆ ಮಾಡಲಾಗುತ್ತಿದೆ.
ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರು, ಪ್ರತ್ಯೆಕ ಕೌಂಟರ್‍ನಲ್ಲಿ ಕೈಗೊಳ್ಳಲಾಗಿ ರುವ ಕ್ರಮಗಳನ್ನು ಪರಿಶೀಲಿಸಿದರು. ನಂತರ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಕೊರೊನಾ ನಿಯಂತ್ರಣಕ್ಕಾಗಿ ವಿಮಾನಗಳ ಪ್ರಯಾಣಿಕರ ಆಗಮನ, ನಿರ್ಗಮನಕ್ಕೆ ಅನುಸರಿಸಬೇಕಾದ ಕ್ರಮಗಳ ಕುರಿತು ನಿರ್ದೇಶನ ನೀಡಿದರು.
ಹೊರ ಜಿಲ್ಲೆಗಳ ಪ್ರಯಾಣಿಕರು ತಮ್ಮ ಸ್ಥಳಗಳಿಗೆ ತೆರಳಲು ಪರಿಶೀಲನೆ ನಂತರ ಅವಕಾಶ ಕಲ್ಪಿಸಲಾಗುವುದು. ವಾಕರಸಾಸಂ ಮತ್ತು ಬಿಆರ್‍ಟಿಎಸ್ ಮೂಲಕ ಬಸ್‍ಗಳ ಸೌಕರ್ಯ ಏರ್ಪಡಿಸಲಾಗಿದೆ ಎಂದರು.
ಪಾಲಿಕೆ ಆಯುಕ್ತ ಡಾ.ಸುರೇಶ ಇಟ್ನಾಳ, ವಿಮಾನ ನಿಲ್ದಾಣ ನಿರ್ದೇಶಕ ಪ್ರಮೋದ್ ಠಾಕ್ರೆ, ವಾಕರಸಾಸಂ ಅಧಿಕಾರಿಗಳಾದ ವಿವೇಕಾನಂದ ವಿಶ್ವಜ್ಞ, ಎಚ್.ರಾಮನಗೌಡರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಶವಂತ ಮದೀನಕರ, ಕಿಮ್ಸ್ ತಜ್ಞ ವೈದ್ಯಡಾ.ಲಕ್ಷ್ಮೀಕಾಂತ ಲೋಕರೆ ಮತ್ತಿತರರಿದ್ದರು.