ಹುಬ್ಬಳ್ಳಿ: ಎಚ್‍ಐವಿ ಸೋಂಕು ಹಾಗೂ ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿ ಕೊರೊನಾ ಸೋಂಕಿಗೆ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಹೆಚ್‍ಐವಿ ಹಾಗೂ ಇತರ ಅನಾರೋಗ್ಯ ಲಕ್ಷಣಗಳಿಂದ ಬಳಲುತ್ತಿದ್ದ 42 ವರ್ಷದ ಪುರುಷ ಜೂನ್ 24ರ ರಾತ್ರಿ ಕಿಮ್ಸ್ ನಲ್ಲಿ ಮೃತಪಟ್ಟಿದ್ದಾರೆ. ಕೆಮ್ಮು, ಆಹಾರ ನುಂಗಲು ತೊಂದರೆ, ನಿಶ್ಯಕ್ತಿ ಮತ್ತಿತರ ಲಕ್ಷಣಗಳಿಂದ ಬಳಲುತ್ತಿದ್ದ ಇವರು ರೋಗಿ ಸಂಖ್ಯೆ 6839 ಜೊತೆ ಸಂಪರ್ಕ ಹೊಂದಿದ ಹಿನ್ನೆಲೆಯಲ್ಲಿ ಜೂನ್ 21ರಂದು ಕೋವಿಡ್ ದೃಢಪಟ್ಟಿತ್ತು.

ಶ್ವಾಸಕೋಶದ ಸಮಸ್ಯೆ ಮೊದಲಾದ ಕಾರಣಗಳಿಂದ ಸೋಂಕಿತ ಜೂನ್ 24ರಂದು ರಾತ್ರಿ 11.15ಕ್ಕೆ ಕೊನೆಯುಸಿರೆಳೆದ್ದಿದ್ದರು. ಆದರೆ ಇಂದು ಈ ಸಾವನ್ನು ಜಿಲ್ಲಾಡಳಿತ ಅಧಿಕೃತವಾಗಿ ಘೋಷಣೆ ಮಾಡಿದೆ.
ಮೃತ ವ್ಯಕ್ತಿಯ ಪಾರ್ಥಿವ ಶರೀರದ ಅಂತ್ಯಕ್ರಿಯೆ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಅಣ್ಣಿಗೇರಿ ತಾಲೂಕಿನ ಸಾಸ್ವಿಹಳ್ಳಿಯಲ್ಲಿ ಇಂದು ಜರುಗಿದೆ.
Laxmi News 24×7