Breaking News

ಹುಬ್ಬಳ್ಳಿ:ನೈಋತ್ಯ ರೈಲ್ವೇ ವಲಯದಿಂದ ಜ್ವರ ಚಿಕಿತ್ಸಾಲಯ ಪ್ರಾರಂಭ

Spread the love

ಹುಬ್ಬಳ್ಳಿ: ಸಾಮಾನ್ಯ ಜ್ವರ, ಕೆಮ್ಮು, ಶೀತದ ಚಿಕಿತ್ಸೆಗಾಗಿ ನೈಋತ್ಯ ರೈಲ್ವೇ ವಲಯ ಹುಬ್ಬಳ್ಳಿಯಲ್ಲಿ ಪ್ರತ್ಯೇಕವಾಗಿ ಜ್ವರ ಚಿಕಿತ್ಸಾಲಯಗಳನ್ನು ತೆರೆಯುವ ಮೂಲಕ ತನ್ನ ಆರೋಗ್ಯ ರಕ್ಷಣೆಯನ್ನು ಹೆಚ್ಚಿಸಿದೆ.

ಜ್ವರ ಚಿಕಿತ್ಸಾಲಯಗಳನ್ನು ಇತರ ಸ್ಥಳಗಳಲ್ಲಿ ಸ್ಥಾಪಿಸಲು ಯೋಜಿಸಲಾಗಿದೆ. ಎಸ್‍ಡಬ್ಲ್ಯುಆರ್ ನ ರೈಲ್ವೇ ಆಸ್ಪತ್ರೆಗಳಲ್ಲಿ ವೈದ್ಯರು, ನರ್ಸ್, ಅರೆವೈದ್ಯಕೀಯ ಸಿಬ್ಬಂದಿ ಮತ್ತು ವೈಯಕ್ತಿಕ ರಕ್ಷಣಾ ಸಾಧನಗಳೊಂದಿಗೆ ಪ್ರತ್ಯೇಕ ತಂಡದೊಂದಿಗೆ ಪ್ರತ್ಯೇಕ ಕ್ಲಿನಿಕ್ ಸ್ಥಾಪಿಸಲಾಗಿದೆ.

ಕೋವಿಡ್ -19 ರೋಗ ನಿಯಂತ್ರಣಕ್ಕಾಗಿ ಜ್ವರ ಚಿಕಿತ್ಸಾಲಯಗಳನ್ನು ಇತರ ಸ್ಥಳಗಳಲ್ಲಿ ಸ್ಥಾಪಿಸಲು ಯೋಜಿಸಲಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೊರಡಿಸಿದ ಎಲ್ಲಾ ಮಾರ್ಗಸೂಚಿಗಳನ್ನು ಈ ರೋಗಿಗಳಿಗೆ ಪ್ರತ್ಯೇಕ ಪ್ರವೇಶ ಮತ್ತು ನಿರ್ಗಮನದೊಂದಿಗೆ ಅನುಸರಿಸಲಾಗುತ್ತಿದೆ. ಈ ರೋಗಿಗಳನ್ನು ಮೊದಲು ಥರ್ಮಲ್ ಸ್ಕ್ಯಾನರ್ ಮತ್ತು ಕೇಸ್ ಪೇಪರ್ ಮೂಲಕ ಸ್ಕ್ಯಾನ್ ಮಾಡಲಾಗುತ್ತಿದೆ.

ಕೋವಿಡ್ -19 ವೈರಸ್‍ನ ಯಾವುದೇ ಲಕ್ಷಣಗಳು ರೋಗಿಯಲ್ಲಿ ಕಂಡುಬಂದರೆ, ಗಂಟಲು/ ಮೂಗಿನ ಸ್ವ್ಯಾಬ್ ಅನ್ನು ಟಚ್ ಅಲ್ಲದ ಕ್ಯುಬಿಕಲ್ ಬಳಸಿ ಸಂಗ್ರಹಿಸಿ ಗುರುತಿಸಿದ ಆಸ್ಪತ್ರೆಗಳಿಗೆ ಕಳುಹಿಸಲಾಗುತ್ತಿದೆ. ಜ್ವರ ಚಿಕಿತ್ಸಾಲಯಗಳನ್ನು ಎಸ್‍ಡಬ್ಲ್ಯುಆರ್‍ನಲ್ಲಿ ಹೆಚ್ಚುವರಿ ಸ್ಥಳಗಳಲ್ಲಿ ಸ್ಥಾಪಿಸಲು ಯೋಜಿಸಲಾಗಿದೆ. ರಾಜ್ಯ ಸರ್ಕಾರ ಗೊತ್ತುಪಡಿಸಿದಂತೆ ಈ ಸೌಲಭ್ಯಗಳು ಸಾರ್ವಜನಿಕರಿಗೆ ಮುಕ್ತವಾಗಿವೆ.


Spread the love

About Laxminews 24x7

Check Also

ಸಿಎಂ ಸ್ಥಾನ ಖಾಲಿಯಿಲ್ಲ, ಸಿದ್ದರಾಮಯ್ಯ ನೇತೃತ್ವದಲ್ಲೇ ಮುಂದುವರೆಯುತ್ತಿದ್ದೇವೆ,

Spread the loveಚಾಮರಾಜನಗರ: “ಸಿಎಂ ಸ್ಥಾನ ಖಾಲಿಯಿಲ್ಲ, ಸಿದ್ದರಾಮಯ್ಯ ಅವರ ನೇತೃತ್ವದಲ್ಲೇ ಐದು ವರ್ಷ ಮುಂದುವರಿಯುತ್ತೇವೆ” ಎಂದು ಅರಣ್ಯ ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ