Breaking News
Home / ಜಿಲ್ಲೆ / ಹುಬ್ಬಳ್ಳಿಯ ಕಮರಿಪೇಟೆ ಠಾಣೆಯ ಐವರು ಪೊಲೀಸರು ಹೋಂಕ್ವಾರಂಟೈನ್‍ಗೆ

ಹುಬ್ಬಳ್ಳಿಯ ಕಮರಿಪೇಟೆ ಠಾಣೆಯ ಐವರು ಪೊಲೀಸರು ಹೋಂಕ್ವಾರಂಟೈನ್‍ಗೆ

Spread the love

ಹುಬ್ಬಳ್ಳಿ, ಏ.11- ಪೊಲೀಸ್ ಇಲಾಖೆಗೂ ಕೊರೊನಾ ವೈರಸ್ ಬಿಸಿ ತಟ್ಟಿರುವ ಆತಂಕಕಾರಿ ವಿಷಯ ಬೆಳಕಿಗೆ ಬಂದಿದೆ. ಕಮರಿಪೇಟೆ ಪೊಲೀಸ್ ಠಾಣೆಯ ಐದು ಜನ ಪೊಲೀಸರನ್ನು ಹೋಂ ಕ್ವಾರಂಟೈನ್‍ಗೆ ಕಳುಹಿಸಲಾಗಿದೆ.

ಐದು ಜನ ಪೊಲೀಸ್ ಸಿಬ್ಬಂದಿ ಕೈಗೆ ಆರೋಗ್ಯ ಇಲಾಖೆ ಸಿಬ್ಬಂದಿ ಸೀಲ್ ಹಾಕಿ ಹೋಂ ಕ್ವಾರಂಟೈನ್‍ನಲ್ಲಿಡಲಾಗಿದೆ. ಹುಬ್ಬಳ್ಳಿಯ ಮುಲ್ಲಾ ಓಣಿಯ ಸೋಂಕಿತನ ಜೊತೆ ಪ್ರಾಥಮಿಕ ಸಂಪರ್ಕದ ಹಿನ್ನೆಲೆಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ಹೋಂ ಕ್ವಾರಂಟೈನ್‍ನಲ್ಲಿಡಲಾಗಿದೆ.

ಕಮರಿಪೇಟೆ ಠಾಣಾ ವ್ಯಾಪ್ತಿಯಲ್ಲಿರುವ ಮುಲ್ಲಾ ಓಣಿಯಲ್ಲಿರುವ ಸದ್ಯ ಐವರಿಗೆ ಹೋಂ ಕ್ವಾರಂಟೈನ್ ನಲ್ಲಿರುವಂತೆ ಸೂಚನೆ ನೀಡಲಾಗಿದ್ದು, ಪೊಲೀಸ್ ಇಲಾಖೆ ಸಂಕಷ್ಟಕ್ಕೆ ಸಿಲುಕಿದೆ. ಕೊರೊನಾ ನಿಯಂತ್ರಣದಲ್ಲಿ ಹಗಲಿರುಳು ಕೆಲಸ ನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿಗೂ ಕೊರೊನಾ ತಗುಲಿರುವುದು ಆತಂಕ ಉಂಟುಮಾಡಿದೆ.

ರಾಜ್ಯಾದ್ಯಂತ ಪೊಲೀಸರು ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಕೆಲಸ ಮಾಡುತ್ತಿದ್ದಾರೆ. ಮಾಸ್ಕ್, ಸ್ಯಾನಿಟೈಜರ್ ಮತ್ತಿತರ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ತಮ್ಮ ಕೆಲಸದಲ್ಲಿ ನಿರತರಾಗಿರುವ ನಡುವೆಯೂ ಕೂಡ ಹುಬ್ಬಳ್ಳಿಯ ಕಮರಿಪೇಟೆಯ ಐವರಿಗೆ ಕೊರೊನಾ ಲಕ್ಷಣಗಳು ಕಂಡುಬಂದಿದೆ.


Spread the love

About Laxminews 24x7

Check Also

ಹಳೆಯ ದ್ವೇಷಕ್ಕೆ 200 ಅಡಿಕೆ ಗಿಡ ಕಡಿದು ಹಾಕಿದ ದುಷ್ಕರ್ಮಿಗಳು!

Spread the love ದಾವಣಗೆರೆ: ಇಬ್ಬರು ವ್ಯಕ್ತಿಗಳ ನಡುವೆ ಇದ್ದ ಹಳೆಯ ದ್ವೇಷಕ್ಕೆ ತೋಟದಲ್ಲಿ ಬೆಳೆದಿದ್ದ ಅಡಿಕೆ ಗಿಡಗಳು ನಾಶವಾಗಿವೆ. ದಾವಣಗೆರೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ