ಬೆಂಗಳೂರು: ಮಾಜಿ ಸಿಎಂ ಹೆಚ್ಡಿ ಕುಮಾರ ಸ್ವಾಮಿ ಅವರ ಕುಟುಂಬಕ್ಕೆ ಹೊಸ ಸದಸ್ಯನ ಆಗಮನವಾಗಿದ್ದು, ನಿಖಿಲ್ ಕುಮಾರಸ್ವಾಮಿ ಅವರ ಪತ್ನಿ ರೇವತಿ ಅವರು ಇಂದು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಕುರಿತು ತಮ್ಮ ಸಂತಸವನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿರುವ ಕುಮಾರಸ್ವಾಮಿ ಅವರು, ತಾತನಾದೆ ಎಂದು ಹೇಳಲು ಅತೀವ ಸಂತಸವಾಗುತ್ತಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಹೆಚ್ಡಿಕೆ, ನನ್ನ ಜೀವನದಲ್ಲಿ ಇನ್ನೊಂದು ಶುಭ ಘಳಿಗೆ ಬಂದಿದೆ. ನಮ್ಮ ಪರಿವಾರಕ್ಕೆ ಹೊಸ ಸದಸ್ಯನ ಆಗಮನವಾಗಿದೆ. ತಾತನಾದೆ ಎಂದು ಹೇಳಲು ಅತೀವ ಸಂತಸವಾಗುತ್ತಿದೆ. ಕಂದನಿಗೆ ನಿಮ್ಮೆಲ್ಲರ ಹಾರೈಕೆ ಮತ್ತು ಆಶೀರ್ವಾದ ಇರಲಿ ಎಂದು ಪ್ರಾರ್ಥನೆ ಮಾಡುತ್ತೇನೆ ಎಂದು ಬರೆದುಕೊಂಡಿದ್ದಾರೆ. ಕುಮಾರಸ್ವಾಮಿ ಅವರ ಟ್ವೀಟ್ಗೆ ಸಾವಿರಾರರು ಮಂದಿ ಪ್ರತಿಕ್ರಿಯೆ ನೀಡುತ್ತಿದ್ದು, ನಿಖಿಲ್ ಮತ್ತು ರೇವತಿ ದಂಪತಿಗೆ ಶುಭ ಕೋರಿ ರೀ ಟ್ವೀಟ್ ಮಾಡುತ್ತಿದ್ದಾರೆ.
Laxmi News 24×7