Breaking News

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿಯಾದ ಹೆಚ್‌ಡಿಕೆ

Spread the love

ನವದೆಹಲಿ: ಉಕ್ಕು ಸಚಿವಾಲಯದ ವಿವಿಧ ಅಭಿವೃದ್ಧಿ ವಿಷಯಗಳಿಗೆ ಸಂಬಂಧಿಸಿದಂತೆ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ. ಕುಮಾರಸ್ವಾಮಿ  ಅವರು ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್   ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.

ಉಕ್ಕು ಸಚಿವಾಲಯದ ಹಿರಿಯ ಅಧಿಕಾರಿಗಳೊಂದಿಗೆ ಸಂಸತ್ತಿನಲ್ಲಿ ಕೇಂದ್ರದ ಹಣಕಾಸು ಸಚಿವರ ಕಚೇರಿಯಲ್ಲಿ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿದ ಕುಮಾರಸ್ವಾಮಿ ಅವರು, ಪ್ರಮುಖ ಅಭಿವೃದ್ಧಿ ಆದ್ಯತೆಗಳ ಕುರಿತು ವಿವರವಾದ ಚರ್ಚೆಗಳನ್ನು ನಡೆಸಿದರು.

ಉಕ್ಕು ಸಚಿವಾಲಯದ ಹೊಸ ಹೂಡಿಕೆಗಳು ಮತ್ತು ಈಗಾಗಲೇ ನಡೆಯುತ್ತಿರುವ ಯೋಜನೆಗಳನ್ನು ಬಗ್ಗೆ ಹಾಗೂ ಉಕ್ಕು ವಲಯವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಸಚಿವರ ಜತೆ ಸಮಾಲೋಚನೆ ನಡೆಸಲಾಯಿತು ಎಂದು ಸಚಿವ ಕುಮಾರಸ್ವಾಮಿ ತಿಳಿಸಿದ್ದಾರೆ.

ಸುಸ್ಥಿರ ಬೆಳವಣಿಗೆಯನ್ನು ಉತ್ತೇಜಿಸುವ ಮತ್ತು ವಿಕಸಿತ ಭಾರತ-2047 ದೃಷ್ಟಿಕೋನವನ್ನು ಮುನ್ನಡೆಸುವ ಭವಿಷ್ಯತ್ತಿನ ಕೇಂದ್ರದ ಆಯವ್ಯಯವನ್ನು ಮಂಡಿಸಿದ್ದಕ್ಕಾಗಿ ಹಣಕಾಸು ಸಚಿವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದೆ ಎಂದು ಸಚಿವರು ಹೇಳಿದ್ದಾರೆ.


Spread the love

About Laxminews 24x7

Check Also

ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

Spread the loveಹೊಸದಿಲ್ಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರಾಗಿದ್ದು, ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ