ಬೆಂಗಳೂರು, ಜ. 10: ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಬ್ರಿಟಿಷರ ಕಾಲದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಮೇಲೆ ಇಷ್ಟೊಂದು ದಬ್ಬಾಳಿಕೆ ಆಗಿರಲಿಕ್ಕಿಲ್ಲ. ಅದಕ್ಕಿಂತ ಹೆಚ್ಚಿನ ದಬ್ಬಾಳಿಕೆ ಸಿಎಎ ವಿರೋಧಿ ಹೋರಾಟಗಾರರನ್ನು ಹತ್ತಿಕ್ಕಲು ರಾಜ್ಯ ಬಿಜೆಪಿ ಸರ್ಕಾರ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
ಜೊತೆಗೆ ಸಿಎಎ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಗೋಲಿಬಾರ್ ಸಂದರ್ಭದಲ್ಲಿ ವಿವಿಧ ಕಡೆಗಳಲ್ಲಿ ಚಿತ್ರೀಕರಿಸಲಾಗಿದ್ದ 26 ನಿಮಿಷ 6 ಸೆಕೆಂಡುಗಳ ಸ್ಪೋಟಕ ವಿಡಿಯೊವನ್ನು ಅವರು ಬಿಡುಗಡೆ ಮಾಡಿದ್ದಾರೆ. ಬೆಂಗಳೂರಿನ ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳಿಗೆ ಸಿಡಿ ಬಿಡುಗಡೆ ಮಾಡಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಎಚ್ಡಿಕೆ ಮಾತನಾಡಿ, ಪ್ರಕರಣದ ತನಿಖೆಗೆ ಸದನ ಸಮಿತಿ ರಚನೆ ಮಾಡಲೇಬೇಕು, ಮಾಡದೇ ಇದ್ದರೆ ವಿಧಾನಸಭೆಯಲ್ಲಿ ಅತ್ಯುಗ್ರ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.
.
