Breaking News
Home / ಜಿಲ್ಲೆ / ರೈತರ ಉತ್ಪನ್ನಗಳನ್ನ ಸರ್ಕಾರವೇ ಖರೀದಿಸಿ ಮಾರಾಟ ಮಾಡಲಿ: ಎಚ್‍ಡಿಕೆ

ರೈತರ ಉತ್ಪನ್ನಗಳನ್ನ ಸರ್ಕಾರವೇ ಖರೀದಿಸಿ ಮಾರಾಟ ಮಾಡಲಿ: ಎಚ್‍ಡಿಕೆ

Spread the love

ಸರ್ಕಾರ ಮೂಗಿಗೆ ತುಪ್ಪ ಸವರೋ ಬಗ್ಗೆ ಮಾತನಾಡ್ತಿದೆ
– ತಕ್ಷಣವೇ ರೈತರ ನೆರವಿಗೆ ಧಾವಿಸಬೇಕು

ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

 

ಬೆಂಗಳೂರು: ಕೊರೊನಾ ಲಾಕ್‍ಡೌನ್‍ನಿಂದ ರೈತರು ತಾವು ಬೆಳೆದ ಬೆಳೆಯನ್ನು ಮಾರಾಟ ಮಾಡಲಾಗದೇ ಸಂಕಷ್ಟ ಪಡುತ್ತಿದ್ದಾರೆ. ಹೀಗಾಗಿ ರೈತರ ಉತ್ಪನ್ನಗಳನ್ನು ಸರ್ಕಾರವೇ ಖರೀದಿಸಿ ಮಾರಾಟ ಮಾಡಲು ತಡಮಾಡದೇ ಕ್ರಮಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಕುಮಾರಸ್ವಾಮಿ ಈ ಬಗ್ಗೆ ಸರಣಿ ಟ್ವೀಟ್ ಮಾಡುವ ಮೂಲಕ ರೈತರಿಗೆ ಪರಿಹಾರ ನೀಡಬೇಕೆಂದು ಹೇಳಿದ್ದಾರೆ. ಮೊದಲಿಗೆ “ಲಾಕ್ ಡೌನ್ 3ನೇ ವಾರದ ಮುಕ್ತಾಯಕ್ಕೆ ಬರುತ್ತಿದ್ದರೂ ಬೆಳೆದ ಬೆಳೆ ಮಾರಾಟವಾಗದೆ ಜಮೀನಿನಲ್ಲೇ ಕೊಳೆಯುತ್ತಿರುವುದನ್ನು ಕಂಡು ರೈತರು ‘ಹೆತ್ತ ಮಕ್ಕಳು’ ಅಕಾಲ ಮರಣಕ್ಕೀಡಾದಂತೆ ಸಂಕಟ ಪಡುತ್ತಿದ್ದಾರೆ. ರೈತರ ಸಂಕಷ್ಟ ಪರಿಹರಿಸಲು ಪ್ರತಿ ಗ್ರಾಮಗಳಲ್ಲಿ ಪ್ರತಿಯೊಬ್ಬ ರೈತರು ಬೆಳೆದ ಬೆಳೆಗಳನ್ನು ಸಮೀಕ್ಷೆ ಮಾಡಿ ಮೂರು ದಿನದಲ್ಲಿ ಪರಿಹಾರ ನೀಡಲಿ” ಎಂದು ಬರೆದುಕೊಂಡಿದ್ದಾರೆ. ಜೊತೆಗೆ ಜಮೀನಲ್ಲೇ ಕೊಳೆಯುತ್ತಿರುವ ಬೆಳೆಯ ವಿಡಿಯೋವನ್ನು ಶೇರ್ ಮಾಡಿದ್ದಾರೆ.

ರಾಜ್ಯ ಸರ್ಕಾರ ಕೃಷಿ ಉತ್ಪನ್ನಗಳ ಸುಗಮ ಮಾರಾಟ, ಸಾಗಾಣಿಕೆ ಮತ್ತು ಸೂಕ್ತ ಮಾರುಕಟ್ಟೆ ಒದಗಿಸುವಲ್ಲಿ ಇನ್ನೂ ಕ್ರಿಯಾಶೀಲವಾಗಿಲ್ಲ. ಬರೀ ಚಿಂತನ-ಮಂಥನದಲ್ಲೇ ಕಾಲ ಕಳೆಯುವುದನ್ನು ಬಿಟ್ಟು ತಕ್ಷಣವೇ ರೈತರ ನೆರವಿಗೆ ಧಾವಿಸಬೇಕು ಎಂದಿದ್ದಾರೆ.


Spread the love

About Laxminews 24x7

Check Also

ಬಹುಭಾಷಾ ನಟ ಪ್ರಕಾಶ್ ರೈ ಮತ ಚಲಾಯಿಸಿದ್ದು ಯಾರಿಗೆ ಗೊತ್ತಾ?

Spread the love ಲೋಕಸಭೆ ಚುನಾವಣೆ 2024 ರ ಎರಡನೇ ಹಂತದಲ್ಲಿ ಇಂದು ಶುಕ್ರವಾರ (ಏಪ್ರಿಲ್ 26) ಆರಂಭವಾಗಿದೆ. 13 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ