Home / ಜಿಲ್ಲೆ / ಉದ್ವಿಗ್ನ ಪರಿಸ್ಥಿತಿ ನಿರ್ಮಾಣ ಮಾಡಿ ದಂಗೆ ಏಳುವವರರ ಹೆಡೆಮುರಿ ಕಟ್ಟಬೇಕು:H.D.K

ಉದ್ವಿಗ್ನ ಪರಿಸ್ಥಿತಿ ನಿರ್ಮಾಣ ಮಾಡಿ ದಂಗೆ ಏಳುವವರರ ಹೆಡೆಮುರಿ ಕಟ್ಟಬೇಕು:H.D.K

Spread the love

ಬೆಂಗಳೂರಿನ ಪಾದರಾಯನಪುರದಲ್ಲಿ ಕೊರೋನಾ ಸೋಂಕಿತರ ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್ ಗೆ ಕಳುಹಿಸಲು ಮುಂದಾಗಿದ್ದ ಪೊಲೀಸರು, ವೈದ್ಯಕೀಯ,ಬಿಬಿಎಂಪಿ ಸಿಬ್ಬಂದಿಗಳ ಮೇಲೆ ಉದ್ರಿಕ್ತ ಗುಂಪು ಹಲ್ಲೆ ನಡೆಸಿರುವುದು ಖಂಡನೀಯ.
ಮುಲಾಜಿಲ್ಲದೆ ಅಂಥವರ ವಿರುದ್ಧ ಕಠಿಣ ಕಾನೂನು ಅಸ್ತ್ರ ಪ್ರಯೋಗಿಸಬೇಕು.ದೇಶದ ಸ್ವಾಸ್ಥ್ಯ ಕಿಂತ ಬೇರಾವುದೂ ಮುಖ್ಯವಲ್ಲ. ಈ ಘಟನೆ ನಾಗರಿಕ ಸಮಾಜ ತಲೆತಗ್ಗಿಸುವಂತಹದು.
ಕಾನೂನು ಕೈಗೆತ್ತಿಕೊಂಡು ಗೂಂಡಾಗಿರಿ,ದೌರ್ಜನ್ಯ ನಡೆಸಿರುವುದು ಅಕ್ಷಮ್ಯ ಅಪರಾಧ.

ಯಾವುದೇ ಧರ್ಮದವರಿರಲಿ ಈ ದೇಶದ ಕಾನೂನಿಗೆ ತಲೆ ಬಾಗಿಸಬೇಕು. ಇಂತಹ ಅತಿರೇಕದ ಹುಚ್ಚಾಟಗಳನ್ನು ಯಾರೂ ಪ್ರದರ್ಶಿಸ ಕೂಡದು.
ದೇಶದ ಕಾನೂನಿಗೆ ವ್ಯತಿರಿಕ್ತವಾಗಿ ನಡೆದುಕೊಳ್ಳುವವರನ್ನು ಮುಲಾಜಿಲ್ಲದೆ ‘ಬಲಿ’ ಹಾಕಬೇಕು.

ಇಡೀ ಜಗತ್ತು ಎದುರಿಸುತ್ತಿರುವ ಕರೋನಾ ವೈರಸ್ ವಿರುದ್ಧ ಜನತೆ ಸಂಘರ್ಷ ಮಾಡುತ್ತಿದ್ದಾರೆ. ಇಂತಹ ವಿಷಮ ಪರಿಸ್ಥಿತಿಯಲ್ಲಿ ಧರ್ಮದ ಗುರಾಣಿಯನ್ನು ಅಡ್ಡ ತಂದು ವ್ಯವಸ್ಥೆ ಬುಡಮೇಲು ಮಾಡುವುದನ್ನು ಅತ್ಯುಗ್ರವಾಗಿ ಖಂಡಿಸುತ್ತೇನೆ.

ಪೊಲೀಸರು, ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಆಡಳಿತ ವ್ಯವಸ್ಥೆಯ ನೈತಿಕ ಬಲ ಕುಗ್ಗಿಸುವ ಮತ್ತು ಉದ್ವಿಗ್ನ ಪರಿಸ್ಥಿತಿ ನಿರ್ಮಾಣ ಮಾಡಿ ದಂಗೆ ಏಳುವವರರ ಹೆಡೆಮುರಿ ಕಟ್ಟಬೇಕು


Spread the love

About Laxminews 24x7

Check Also

ಬುಧವಾರದಂದು ಪ್ರಧಾನಿಗಳು ಆಗಮಿಸುವ ಸ್ಥಳವನ್ನು ಪರಿಶೀಲಿಸಿದ : ಬಾಲಚಂದ್ರ & ರಮೇಶ್ ಜಾರಕಿಹೊಳಿ

Spread the loveಬೆಳಗಾವಿ- ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿಗೆ ಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ