Breaking News

ನಾನು ಯಾರ ಋಣದಲ್ಲಿಯೂ ಸಿಎಂ ಆಗಿರಲಿಲ್ಲ. ಅವರೇ ನನ್ನ ಮನೆ ಬಾಗಿಲಿಗೆ ಬಂದು ಸಿಎಂ ಆಗಿ ಎಂದು ಹೇಳಿಕೊಂಡಿದ್ರು

Spread the love

ರಾಮನಗರ: ನಾನು ಯಾರ ಋಣದಲ್ಲಿಯೂ ಸಿಎಂ ಆಗಿರಲಿಲ್ಲ. ಅವರೇ ನನ್ನ ಮನೆ ಬಾಗಿಲಿಗೆ ಬಂದು ಸಿಎಂ ಆಗಿ ಎಂದು ಹೇಳಿಕೊಂಡಿದ್ರು ಅಂತಾ ಮಾಜಿ ಸಿಎಂ ಹೆಚ್ . ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಚನ್ನಪಟ್ಟಣದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾರಸ್ವಾಮಿ ಅವರನ್ನು ಸಿಎಂ ಮಾಡಿ ಕೆಲವರು ಬಾರಿ ಬೆಂಬಲ ಕೊಟ್ಟಿದ್ರು. ಯಾರಿಂದ ಅಧಿಕಾರ ಕಳೆದುಕೊಂಡೆ ಅಂತಾ ನನಗೆ ಗೊತ್ತು. ಕೆಲವರು ಕುಮಾರಸ್ವಾಮಿ ಅವರನ್ನು ಉಳಿಸಿದ್ದೆ ನಾವು ಅಂತಾ ಪ್ರಚಾರ ಪಡೆದುಕೊಂಡಿದ್ದಾರೆ ಅಂತಾನು ಗೊತ್ತು. ಇದೀಗ ನಮ್ಮ ಪಕ್ಷ ಮುಗಿಸುತ್ತೇವೆ ಅಂತಾ ಕೆಲವರು ಹೊರಟ್ಟಿದ್ದಾರೆ ಎಂದು ರಾಮನಗರ ಜಿಲ್ಲಾ ಕಾಂಗ್ರೆಸ್​​ ನಾಯಕರ ಹೆಸರು ಪ್ರಸ್ತಾಪಿಸದೇ ವಾಗ್ದಾಳಿ ನಡೆಸಿದರು.

ನನ್ನದು ಒಂದು ಸಣ್ಣ ಪಕ್ಷ ಇದೆ ರೈತರ ಪಕ್ಷ ಈ ಪಕ್ಷವನ್ನ ದಿವಾಳಿ ಮಾಡಿ ಇನ್ಯಾರಿಗೊ ಅಧಿಕಾರ ಕೊಡಲು ಓಡಾಡಲ್ಲ, ರಾಜ್ಯದಲ್ಲಿ ಯಾವ ಮೈತ್ರಿಯೂ ಇಲ್ಲ, ರಾಜ್ಯದಲ್ಲಿ ಎಲ್ಲಿದೆ ಮೈತ್ರಿ. ರಾಜ್ಯಸಭೆ ಚುನಾವಣೆ ಬಗ್ಗೆ ಯಾವುದೇ ಪಕ್ಷದಿಂದ ಯಾವುದೇ ನಿರ್ಧಾರ ಮಾಡಿಲ್ಲ, ದೇವೇಗೌಡರು ಸಹ ಯಾವುದೇ ತೀರ್ಮಾನ ಮಾಡಿಲ್ಲ, ಅವರು ಜನರ ಮಧ್ಯೆ ಹೋಗಿ ಚರ್ಚೆ ಮಾಡಿ ತಿರ್ಮಾನ ಮಾಡುತ್ತಾರೆ. ಅವರು ಯಾವತ್ತೂ ಹಿಂಬಾಗಿಲಿನ ರಾಜಕಾರಣ ಮಾಡಿಲ್ಲ, ಕೆಲವು ಗಾಳಿ ಸುದ್ದಿಗಳಿವೆ ಅದರ ಬಗ್ಗೆ ಚರ್ಚೆ ಬೇಡ. ಕಾಂಗ್ರೆಸ್ ಪಕ್ಷದ ಜತೆಗೆ ಯಾವುದೇ ಮಾತುಕತೆ ನಡೆದಿಲ್ಲ ಎಂದು ಹೆಚ್.ಡಿ ಕುಮಾರಸ್ವಾಮಿ ಅವರು ತಿಳಿಸಿದರು.


Spread the love

About Laxminews 24x7

Check Also

ಬೆಂಗಳೂರಿಂದ ತಿರುಪತಿಗೆ ಹೊರಟಿದ್ದ ಕಾರು ಅಪಘಾತ; ಅಪ್ಪ-ಅಮ್ಮ, 4 ವರ್ಷದ ಮಗು ಸ್ಥಳದಲ್ಲೇ ಸಾವು

Spread the loveಬೆಂಗಳೂರು: ನಗರದಿಂದ ತಿರುಪತಿ ವೆಂಕಟೇಶ್ವರ ಸ್ವಾಮಿ  ದರ್ಶನಕ್ಕೆ ಹೊರಟಿದ್ದ ಒಂದೇ ಕುಟುಂಬದ ಮೂವರು ಭೀಕರ ಅಪಘಾತದಲ್ಲಿ ( …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ