Breaking News
Home / ಜಿಲ್ಲೆ / ವಿರೋಧ ಪಕ್ಷವಾಗಿರುವ ಕಾಂಗ್ರೆಸ್ ಮತದಾನದಿಂದ ಕಾಂಗ್ರೆಸ್-ಜೆಡಿಎಸ್ ದೂರ ಉಳಿಯುವುದಾಗಿ ಹೇಳಿದೆ :ಎಚ್.ಡಿ.ಕುಮಾರಸ್ವಾಮಿ

ವಿರೋಧ ಪಕ್ಷವಾಗಿರುವ ಕಾಂಗ್ರೆಸ್ ಮತದಾನದಿಂದ ಕಾಂಗ್ರೆಸ್-ಜೆಡಿಎಸ್ ದೂರ ಉಳಿಯುವುದಾಗಿ ಹೇಳಿದೆ :ಎಚ್.ಡಿ.ಕುಮಾರಸ್ವಾಮಿ

Spread the love

ಬೆಂಗಳೂರು, ಫೆ.17- ವಿಧಾನಸಭೆಯಿಂದ ವಿಧಾನಪರಿಷತ್‍ನ ಒಂದು ಸ್ಥಾನದ ಉಪ ಚುನಾವಣೆಗೆ ಇಂದು ನಡೆಯುತ್ತಿರುವ ಮತದಾನದಲ್ಲಿ ಭಾಗವಹಿಸದಿರಲು ತೀರ್ಮಾನಿಸಲಾಗಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷವಾಗಿರುವ ಕಾಂಗ್ರೆಸ್ ಮತದಾನದಿಂದ ದೂರ ಉಳಿಯುವುದಾಗಿ ಹೇಳಿದೆ. ಅಲ್ಲದೆ, ಕಾಂಗ್ರೆಸ್-ಜೆಡಿಎಸ್ ಬೆಂಬಲದ ನಿರೀಕ್ಷೆಯಲ್ಲಿ ಸ್ಪರ್ಧೆಗಿಳಿದಿದ್ದ ಪಕ್ಷೇತರ ಅಭ್ಯರ್ಥಿ ಬಿ.ಆರ್.ಅನಿಲ್‍ಕುಮಾರ್ ಈಗಾಗಲೇ ಕಣದಿಂದ ಹಿಂದೆ ಸರಿದಿದ್ದಾರೆ.

ಹೀಗಾಗಿ ನಾವು ಕೂಡ ವಿಧಾನಪರಿಷತ್ ಚುನಾವಣೆ ಮತದಾನದಲ್ಲಿ ಭಾಗವಹಿಸದಿರಲು ತೀರ್ಮಾನಿಸಿದ್ದೇವೆ ಎಂದರು. ನೆರೆ ಹಾವಳಿಗೆ ಸಂಬಂಧಿಸಿದಂತೆ ಸರ್ಕಾರದ ಹಲವು ಲೋಪದೋಷಗಳು, ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ಅವಧಿಯಲ್ಲಿ ಬಿಡುಗಡೆಯಾದ ಅನುದಾನ ಕಡಿತ ಮಾಡಿರುವುದು ಸೇರಿದಂತೆ ಹಲವು ಜ್ವಲಂತ ವಿಚಾರಗಳ ಬಗ್ಗೆ ಅಧಿವೇಶನಲ್ಲಿ ಪ್ರಸ್ತಾಪಿಸಲು ತೀರ್ಮಾನಿಸಲಾಗಿದೆ ಎಂದರು.

# ಜಿಟಿಡಿ ನಮ್ಮಲ್ಲಿದ್ದಾರೆಯೇ ?:
ಜೆಡಿಎಸ್ ಶಾಸಕಾಂಗ ಪಕ್ಷದ ತೀರ್ಮಾನಕ್ಕೆ ಅಗೌರವ ತೋರುವ ರೀತಿಯಲ್ಲಿ ವಿಧಾನಪರಿಷತ್ ಚುನಾವಣೆಯಲ್ಲಿ ಮಾಜಿ ಸಚಿವ ಜಿ.ಟಿ.ದೇವೇಗೌಡ ಮತ ಚಲಾವಣೆ ಮಾಡಿದ್ದರೆ ಅದು ಅವರಿಗೆ ಬಿಟ್ಟ ವಿಚಾರ ಎಂದು ಕುಮಾರಸ್ವಾಮಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು. ಜಿ.ಟಿ.ದೇವೇಗೌಡ ನಮ್ಮಲ್ಲಿದ್ದಾರೆ ಎಂದು ಪ್ರಶ್ನಿಸಿದ ಕುಮಾರಸ್ವಾಮಿ ಜೆಡಿಎಸ್‍ನಲ್ಲೇ ಇರುತ್ತಾರೋ ಅಥವಾ ಮುಂದೆ ಎಲ್ಲಿರುತ್ತಾರೆ ಎಂಬುದನ್ನು ಕಾದು ನೋಡೋಣ ಎಂದರು. ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಗೆ ಮಾಜಿ ಸಚಿವರಾದ ಗುಬ್ಬಿ ಶ್ರೀನಿವಾಸ್, ಜಿ.ಟಿ.ದೇವೇಗೌಡ, ಪುಟ್ಟರಾಜು ಮತ್ತಿತರರು ಗೈರಾಗಿದ್ದರು.


Spread the love

About Laxminews 24x7

Check Also

ವಿದ್ಯಾರ್ಥಿಗಳಿಗೆ ಇನ್ನೂ ತಲುಪಿಲ್ಲ “ಟ್ಯಾಬ್‌’

Spread the love ಬೆಂಗಳೂರು: ರಾಜ್ಯದಲ್ಲಿ ಪದವಿ ಕಾಲೇಜುಗಳು ಆರಂಭವಾಗಿ ಸುಮಾರು ಒಂದೂವರೆ ತಿಂಗಳು ಕಳೆದಿದ್ದು, ಮೊದಲ ಸೆಮಿಸ್ಟರ್‌ ವಿದ್ಯಾರ್ಥಿಗಳಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ