Breaking News
Home / ಜಿಲ್ಲೆ / ಸರ್ಕಾರಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಎಚ್ಚರಿಕೆ …….

ಸರ್ಕಾರಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಎಚ್ಚರಿಕೆ …….

Spread the love

ಬೆಂಗಳೂರು, ಏ.24-ರಾಮನಗರ ಜೈಲ್ ಅನ್ನು ಸಂಪೂರ್ಣ ಕ್ವಾರಂಟೈನ್ ಮಾಡಬೇಕು. ಪೊಲೀಸರು ಸೇರಿದಂತೆ ಜೈಲಿನಲ್ಲಿ ಕಾರ್ಯನಿರ್ವಹಿಸಿದ ಅಡುಗೆ ಮತ್ತು ಸ್ವಚ್ಛತೆಯವರು ಸೇರಿದಂತೆ ಸಂಬಂಧಿಸಿದವರ ಆರೋಗ್ಯ ಕಾಪಾಡಲು ಸರ್ಕಾರ ತಕ್ಷಣವೇ ಕಾರ್ಯೋನ್ಮುಖವಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಸರ್ಕಾರ ತೆಗೆದುಕೊಂಡ ಎಡವಟ್ಟು ನಿರ್ಧಾರದಿಂದ ರಾಮನಗರದಲ್ಲೂ ಸೋಂಕು ಹರಡುವ ಭೀತಿ ಎದುರಾಗಿದೆ. ಸರ್ಕಾರ ಸಕಲ ಮುನ್ನೆಚ್ಚರಿಕೆಯಿಂದ ಪರಿಸ್ಥಿತಿ ನಿಭಾಯಿಸದಿದ್ದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

ರಾಮನಗರ ಕಾರಾಗೃಹದಲ್ಲಿ ಇರಿಸಲಾಗಿದ್ದ ಪಾದರಾಯನಪುರದ ಗಲಭೆಕೋರರ ಪೈಕಿ ಇಬ್ಬರಿಗೆ ಕೊರೋನಾ ವೈರಸ್ ತಗುಲಿರುವ ಪಾಸಿಟಿವ್ ವರದಿ ಬಂದಿದೆ. ಜೈಲಿನಲ್ಲಿ ಇರಿಸಲಾಗಿರುವವರನ್ನು ಸಕಲ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ತಕ್ಷಣವೇ ಸ್ಥಳಾಂತರಿಸಬೇಕು ಎಂದು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

ಈ ಹಿಂದೆಯೇ ಇದೇ ವಿಷಯವಾಗಿ ನಾನು ಸರ್ಕಾರದ ಗಮನ ಸೆಳೆದರೂ ನಿರ್ಲಕ್ಷಿಸಿದರ ಫಲವಾಗಿ ರಾಮನಗರಕ್ಕೂ ಕೊರೋನಾ ವೈರಸ್ ವಕ್ಕರಿಸಿದೆ. ಪಾಸಿಟಿವ್ ಬಂದ ಇಬ್ಬರ ಜತೆಯಲ್ಲಿದ್ದ ಏಳೆಂಟು ಮಂದಿಯನ್ನು ಕ್ವಾರಂಟೈನ್ಗೆ ಕರೆದೊಯ್ಯಲಾಗಿದೆ.
ಸರ್ಕಾರ ತಡಮಾಡದೆ ರಾಮನಗರ ಜೈಲಿನಲ್ಲಿರುವ ಕೈದಿಗಳನ್ನು ಕೂಡಲೇ ಸ್ಥಳಾಂತರ ಮಾಡಬೇಕು. ಸರ್ಕಾರದ ಅವಿವೇಕದ ನಿರ್ಧಾರದಿಂದಾಗಿ ರಾಮನಗರ ಜಿಲ್ಲೆಯ ಜನ ಭೀತಿಗೊಂಡಿದ್ದಾರೆ.

ಇದನ್ನು ಇನ್ನೂ ಸಹಿಸಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈಗಾಗಲೇ ರಾಜ್ಯದಲ್ಲಿ 445 ಮಂದಿ ಸೋಂಕಿಗೆ ತುತ್ತಾಗಿ, 17 ಮಂದಿ ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಎಂಟು ಜಿಲ್ಲೆಗಳು ಮಾತ್ರ ಸೋಂಕು ಮುಕ್ತವಾಗಿವೆ. ಅವುಗಳಲ್ಲಿ ರಾಮನಗರವೂ ಒಂದಾಗಿತ್ತು ಎಂದಿದ್ದಾರೆ.


Spread the love

About Laxminews 24x7

Check Also

ಸುವರ್ಣಸೌಧದ ಹಾಲ್‌ನಲ್ಲಿ 10 ಮಂದಿ ಗಣ್ಯರ ಭಾವಚಿತ್ರ ಅಳವಡಿಸಲು ಸ್ಪೀಕರ್​ಗೆ ರಾಯರೆಡ್ಡಿ ಮನವಿ

Spread the loveಬೆಳಗಾವಿ: ಸಾವರ್ಕರ್ ಫೋಟೋ ತೆರವಿನ ಕೂಗಿನ‌ ಮಧ್ಯೆ ಕಾಂಗ್ರೆಸ್ ಹಿರಿಯ ಶಾಸಕ ಬಸವರಾಜ ರಾಯರೆಡ್ಡಿ ಸುವರ್ಣಸೌಧ ಸಭಾಭವನದಲ್ಲಿ ಗಣ್ಯರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ