Breaking News

ನಿಜಾಮುದ್ದೀನ್ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದವರೆಲ್ಲರೂ ಕಡ್ಡಾಯವಾಗಿ ಪಾಸಣೆಗೆ ಒಳಗಾಗಬೇಕು:ಹೆಚ್.ಡಿ.ಕುಮಾರಸ್ವಾಮಿ

Spread the love

ಬೆಂಗಳೂರು,ಏ.2-ದೆಹಲಿಯ ನಿಜಾಮುದ್ದೀನ್ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದವರೆಲ್ಲರೂ ಕಡ್ಡಾಯವಾಗಿ ಸ್ವಯಂಪ್ರೇರಿತರಾಗಿ ವೈದ್ಯಕೀಯ ತಪಾಸಣೆಗೆ ಒಳಗಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಜೀವಕ್ಕಿಂತ ಯಾವ ಧರ್ಮವೂ ದೊಡ್ಡದಲ್ಲ. ತಪಾಸಣೆ ಮಾಡಲು ಬಂದ ವೈದ್ಯಕೀಯ ಸಿಬ್ಬಂದಿಯ ಮೇಲೆ ಹಲ್ಲೆ ಮಾಡುವುದು, ತಿರುಗಿ ಬೀಳುವುದು ಖಂಡನೀಯ ಎಂದು ಟ್ವಿಟರ್ ನಲ್ಲಿ ತಿಳಿಸಿದ್ದಾರೆ.

 

ದೇಶದ ಸ್ವಾಸ್ಥ್ಯ ಮತ್ತು ಸಂವಿಧಾನಕ್ಕಿಂತ ಯಾರೂ ದೊಡ್ಡವರಲ್ಲ. ಬೆಂಗಳೂರಿನ ಹೆಗಡೆ‌ನಗರದ ಬಳಿ ಬರುವ ಸಾಧಿಕ್‌ನಗರದಲ್ಲಿ ಆಶಾ ಕಾರ್ಯಕರ್ತೆಯರು ತಪಾಸಣೆ ಮಾಡುವ ವೇಳೆ‌ ಯುವಕರು ಗುಂಪಾಗಿ ಸೇರಿ ಅಸಭ್ಯವಾಗಿ ವರ್ತಿಸಿ ಹಲ್ಲೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ರಾಷ್ಟ್ರದ ಹಿತಾಸಕ್ತಿ ವಿರುದ್ಧ ಯಾರೂ ಧ್ವನಿ ಎತ್ತಬಾರದು. ಅತಿರೇಕದ ವರ್ತನೆಗಳಿಗೆ ಖಂಡಿತಾ ನನ್ನ ಬೆಂಬಲವಿಲ್ಲ. ಇದು ಜಾತಿ-ಧರ್ಮಗಳ ಪ್ರಶ್ನೆಯಲ್ಲ. ರಾಷ್ಟ್ರದ ಭವಿಷ್ಯದ ಪ್ರಶ್ನೆ ಎಂದಿದ್ದಾರೆ.


Spread the love

About Laxminews 24x7

Check Also

ಸಂಸದೀಯ ರಾಜಕೀಯದಿಂದ ನಿವೃತ್ತಿಯ ಸುಳಿವು; ಎನ್​​​​ಸಿಪಿ ಮುಖ್ಯಸ್ಥ ಬಾರಾಮತಿಯಲ್ಲಿ ಹೇಳಿದಿಷ್ಟು..

Spread the love ಮುಂಬೈ: ಹಿರಿಯ ರಾಜಕಾರಣಿ ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್​​​(Sharad Pawar) ಸಂಸದೀಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ