Breaking News

ರಾಜ್ಯದ ಬಿಜೆಪಿ ಸರಕಾರವನ್ನು ಪತನಗೊಳಿಸುವ ಇಚ್ಛೆ ಇಲ್ಲ: ಎಚ್.ಡಿ.ದೇವೇಗೌಡ

Spread the love

ರಾಜ್ಯದ ಬಿಜೆಪಿ ಸರಕಾರವನ್ನು ಪತನಗೊಳಿಸುವ ಇಚ್ಛೆ ಇಲ್ಲ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರಕಾರ ತನ್ನ ಅವಧಿ ಪೂರ್ಣಗೊಳಿಸಲಿದೆ. ನಾವು ಸೋಲನ್ನು ಸವಾಲಾಗಿ ಸ್ವೀಕರಿಸಿ ಕೆಳಮಟ್ಟದಿಂದ ಪಕ್ಷ ಸಂಘಟಿಸುವ ಕೆಲಸವನ್ನು ಮಾಡುತ್ತೇವೆ. ರಾಜ್ಯದ ಅಭಿವೃದ್ಧಿಯಾಗಬೇಕೆಂದರೆ ಪ್ರಾದೇಶಿಕ ಪಕ್ಷದಿಂದ ಮಾತ್ರ ಸಾಧ್ಯ. ಇದಕ್ಕೆ ಆಂದ್ರಪ್ರದೇಶ, ತಮಿಳುನಾಡು, ಪಶ್ಚಿಮಬಂಗಾಳ ಮೊದಲಾದವು ಸಾಕ್ಷಿಯಾಗಿವೆ ಎಂದು ಹೇಳಿದರು.

ಸಮ್ಮಿಶ್ರ ಸರಕಾರ ಪತನಕ್ಕೂ ಸಿದ್ದರಾಮಯ್ಯ ಕಾರಣ, ನನ್ನ ಸೋಲಿಗೂ ಅವರೇ ಕಾರಣ ಎಂದ ದೇವೇಗೌಡ, ನಾನು ಯಾರ ವಿರುದ್ಧವೂ ವಯಕ್ತಿಕವಾಗಿ ಮಾತನಾಡಲು ಹೋಗುವುದಿಲ್ಲ. ರಾಜ್ಯದ ಜನರಿಗೆ ಎಲ್ಲವೂ ಗೊತ್ತಿದೆ ಎಂದರು.

ಬೆಳಗಾವಿ ಜಿಲ್ಲೆಯಲ್ಲಿ ಒಂದು ಕಾಲದಲ್ಲಿ 18ರಲ್ಲಿ 14 ಸ್ಥಾನಗಳನ್ನು ಗೆಲ್ಲುವ ಮೂಲಕ ಜೆಡಿಎಸ್ ತನ್ನ ಪ್ರಾಬಲ್ಯವನ್ನು ತೋರಿಸಿದೆ. ಪಕ್ಷಕ್ಕೆ ಜಿಲ್ಲೆಯಲ್ಲಿ ನೆಲೆ ಇದೆ ಎನ್ನುವುದಕ್ಕೆ ಇದೇ ಸಾಕ್ಷಿ ಎಂದು ಅವರು ಹೇಳಿದರು.

ಎನ್.ಎಚ್.ಕೋನರಡ್ಡಿ, ಶಂಕರ ಮಾಡಲಗಿ ಮೊದಲಾದವರು ಇದ್ದರು.


Spread the love

About Laxminews 24x7

Check Also

ಮುನಿರತ್ನಗೆ ಜಾಮೀನು ನೀಡದಿರಲು ಮನವಿ

Spread the love ಮಂಡ್ಯ: ‘ಶಾಸಕ ಮುನಿರತ್ನ ಅವರು ದಲಿತ ನಿಂದನೆ ಮಾಡಿರುವುದು ಸಾಕ್ಷಿ ಸಮೇತ ಸಿಕ್ಕಿರುವುದರಿಂದ ಪರಿಶಿಷ್ಟ ಜಾತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ