Breaking News

ಖಾಲಿ ಸರ್ಕಾರಿ ಕಟ್ಟಡಗಳನ್ನು ಕೊರೋನ ಚಿಕಿತ್ಸೆಗೆ ಬಳಸಿ : ಎಚ್‌ಡಿಕೆ ಸಲಹೆ

Spread the love

ಬೆಂಗಳೂರು,ಮಾ.15-ಕೊರೋನ ವೈರಸ್ ಸೋಂಕಿತರಿಗೆ ಖಾಲಿ ಇರುವ ಸರ್ಕಾರಿ ಕಟ್ಟಡಗಳನ್ನು ಚಿಕಿತ್ಸೆ ನೀಡಲು ಬಳಸಿಕೊಳ್ಳುವಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸರ್ಕಾರಕ್ಕೆ ಸಲಹೆ ಮಾಡಿದ್ದಾರೆ. ಇತರೆ ರೋಗಿಗಳ ಜೊತೆ ಕೊರೋನ ಸೋಂಕಿತರಿಗೆ ಚಿಕಿತ್ಸೆ ನೀಡುವುದು ಸರಿಯೇ ಎಂದು ಅವರು ಟ್ವೀಟ್‍ನಲ್ಲಿ ಪ್ರಶ್ನಿಸಿದ್ದಾರೆ.
ಕೊರೋನ ಸೋಂಕಿತರಿಗೆ ಪ್ರತ್ಯೇಕವಾಗಿ ಚಿಕಿತ್ಸೆ ನೀಡುವುದೇ ಮುಂಜಾಗ್ರತಾ ಕ್ರಮವಾಗಿದ್ದು ಇದಕ್ಕಾಗಿ ಕೆಲ ಆಸ್ಪತ್ರೆಗಳಲ್ಲಿ ಪ್ರತ್ಯೇಕ ಆಸ್ಪತ್ರೆ ತೆರೆದಿರುವುದಾಗಿ ಸರ್ಕಾರ ಹೇಳುತ್ತಿದೆ. ಇತರೆ ರೋಗಿಗಳ ಜೊತೆ ಕೊರೋನ ಸೋಂಕಿತರಿಗೂ ಚಿಕಿತ್ಸೆ ನೀಡುವ ಬದಲು ಖಾಲಿ ಉಳಿದಿರುವ ಸರ್ಕಾರಿ ಕಟ್ಟಡಗಳನ್ನು ಬಳಸಿಕೊಳ್ಳುವಂತೆ ಸಲಹೆ ಮಾಡಿದ್ದಾರೆ.
ರಾಜ್ಯದಲ್ಲಿ ಹಲವು ಸರ್ಕಾರಿ ಮತ್ತು ಖಾಸಗಿ ಕಟ್ಟಡಗಳು ಖಾಲಿ ಉಳಿದಿದ್ದು, ಅದನ್ನು ವೈರಸ್ ಸೋಂಕಿತರಿಗೆ ಚಿಕಿತ್ಸೆ ನೀಡುವ ಕ್ವಾರೆಂಟೈನ್ ಕೇಂದ್ರಗಳನ್ನಾಗಿ ಪರಿವರ್ತಿಸಬೇಕು. ಜನನಿಬಿಡ ಪ್ರದೇಶಗಳಿಂದ ದೂರದಲ್ಲಿ ಈ ಕೇಂದ್ರ ತೆರೆಯಬೇಕು. ಸೋಂಕಿತರ ರಕ್ತ ಮಾದರಿ ಸಂಗ್ರಹಕ್ಕೆ ಅವರಿದ್ದಲ್ಲಿಯೇ ಸಂಗ್ರಹಿಸುವ ವ್ಯವಸ್ಥೆಯಾಗಬೇಕು.
ಸುರಕ್ಷತಾ ಕ್ರಮಗಳನ್ನು ವಿವರಿಸುವ ವಿಚಾರ ಪ್ರಚಾರದ ಸರಕ್ಕಾಗಬಾರದು. ಒಂದು ವೇಳೆ ಹಾಗೇ ಆಗಿದ್ದರೆ ಜನರಲ್ಲಿ ಆತಂಕ ಸೃಷ್ಟಿಯಾಗುತ್ತದೆ. ಆತಂಕ ಸಮೂಹ ಸನ್ನಿಯಾಗಿ ಪರಿವರ್ತನೆಯಾಗಿ ಜನಜೀವನದ ಮೇಲೆ ನೇತ್ಯಾತ್ಮಕ ಪರಿಣಾಮಗಳು ಉಂಟಾಗದಿರಲಿ ಎಂದಿದ್ದಾರೆ.
ಕೊರೋನ ವೈರಸ್ ವಿರುದ್ಧ ಕೈಗೊಂಡಿರುವ ಕ್ರಮಗಳ ಕುರಿತ ಮಾಹಿತಿಯನ್ನು ಜನರಿಗೆ ತಿಳಿಸುವ ವಿಚಾರದಲ್ಲಿ ಎರಡು ಧ್ರುವಗಳು ಸೃಷ್ಟಿಯಾದಂತಿದೆ. ಆರೋಗ್ಯ ಸಚಿವರು ಮತ್ತು ವೈದ್ಯಕೀಯ ಶಿಕ್ಷಣ ಸಚಿವರು ಒಮ್ಮತದಿಂದ ಕಾರ್ಯ ನಿರ್ವಹಿಸಲಿ. ಎರಡು ಇಲಾಖೆಗಳ ನಡುವೆ ಪರಸ್ಪರ ಸಹಕಾರವಿರಲಿ. ಇದು ಪ್ರಚಾರ ಪಡೆಯುವ ಪ್ರಹಸನವಾಗಬಾರದು. ಜನರಲ್ಲಿ ಗೊಂದಲ ಮೂಡದಿರಲಿ ಎಂದು ಕುಮಾರಸ್ವಾಮಿ ಸರಣಿ ಟ್ವೀಟ್‍ನಲ್ಲಿ ತಿಳಿಸಿದ್ದಾರೆ.

About Laxminews 24x7

Check Also

ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಸವಣೂರಿನ ದಂಡಿನಪೇಟೆಯ 500ಕ್ಕೂ ಹೆಚ್ಚು ಮತದಾರರು, ಮತದಾನ ಬಹಿಷ್ಕಾರ

Spread the love ಹಾವೇರಿ: ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಸವಣೂರಿನ ದಂಡಿನಪೇಟೆಯ 500ಕ್ಕೂ ಹೆಚ್ಚು ಮತದಾರರು, ಮತದಾನ ಬಹಿಷ್ಕಾರ ಮಾಡಿದ್ದಾರೆ. ‘ನಮಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ