Breaking News

ಥಾರ್‌, ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಮೆಸ್ಕಾಂ ಅಧಿಕಾರಿ ದುರ್ಮರಣ, ಮೂವರ ಸ್ಥಿತಿ ಗಂಭೀರ

Spread the love

ಚಿಕ್ಕಮಗಳೂರು: ಮಹೀಂದ್ರಾ ಥಾರ್ ಹಾಗೂ ಕಾರಿನ  ನಡುವೆ ಮುಖಾಮುಖಿ ಡಿಕ್ಕಿ  ಸಂಭವಿಸಿ ಕಾರಿನಲ್ಲಿದ್ದ ಮೆಸ್ಕಾಂ  ಅಧಿಕಾರಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಡೂರು ಸಮೀಪದ ಬುಕ್ಕಸಾಗರ ಗೇಟ್ ಬಳಿ ನಡೆದಿದೆ. ಈ ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೆಸ್ಕಾಂನ ಎಇ ಸನತ್ (49) ಮೃತ ದುರ್ದೈವಿ. ಗಂಭೀರವಾಗಿ ಗಾಯಗೊಂಡ ಮೂವರನ್ನು ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ಎರಡು ವಾಹನಗಳು ನಜ್ಜುಗುಜ್ಜಾಗಿವೆ.

ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ತಾಯಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಮಲ್ಪೆಗೆ ಬಂದ ಭೂಗತ ಪಾತಕಿ ರವಿ ಪೂಜಾರಿ

Spread the loveಉಡುಪಿ: ತಾಯಿಯ ಅಂತಿಮ ದರ್ಶನ ಪಡೆದು ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಭೂಗತ ಪಾತಕಿ ರವಿ ಪೂಜಾರಿ ಉಡುಪಿಗೆ ಆಗಮಿಸಿದ್ದಾನೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ