Breaking News

ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಪೌರಕಾರ್ಮಿಕರಿಗೆ ಆರೋಗ್ಯ ತಪಾಸಣೆ

Spread the love

ಬೆಂಗಳೂರು: ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ 1,934 ಪೌರಕಾರ್ಮಿಕರಿಗೆ ಬುಧವಾರ ಆರೋಗ್ಯ ತಪಾಸಣೆ ನಡೆಸಲಾಯಿತು.

ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ಸ್ವಚ್ಛತಾ ಯೋಧರಾದ ಪೌರಕಾರ್ಮಿಕರ ಆರೋಗ್ಯದ ಜವಾಬ್ದಾರಿ ಪಾಲಿಕೆಯ ಮೇಲಿದೆ. ಇವರ ಆರೋಗ್ಯ ತಪಾಸಣೆಯನ್ನು ಪಾಲಿಕೆಯಿಂದ ಆಗಾಗ್ಗೆ ನಿರ್ವಹಿಸಲಾಗುತ್ತದೆ ಎಂದು ಆರೋಗ್ಯಾಧಿಕಾರಿ ಬಾಲಸುಂದರ್ ತಿಳಿಸಿದರು.

ದಕ್ಷಿಣ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ 25 ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳು, 49 ನಮ್ಮ ಕ್ಲಿನಿಕ್‌ಗಳು ಕಾರ್ಯನಿರ್ವಹಿಸುತ್ತಿದ್ದು, ಇಲ್ಲಿ ಬುಧವಾರ ಬೆಳಿಗ್ಗೆ 9ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಉಚಿತವಾಗಿ ಸಾಮೂಹಿಕ ಆರೋಗ್ಯ ತಪಾಸಣೆಯನ್ನು ಪೌರ ಕಾರ್ಮಿಕರಿಗಾಗಿ ಹಮ್ಮಿಕೊಳ್ಳಲಾಗಿತ್ತು. ತಪಾಸಣಾ ಕಾರ್ಯಕ್ರಮದಲ್ಲಿ 56 ವೈದ್ಯಾಧಿಕಾರಿಗಳು ಹಾಗೂ 168 ಅರೆ ವೈದ್ಯಕೀಯ ಸಿಬ್ಬಂದಿ ಭಾಗವಹಿಸಿದ್ದರು. 605 ಪುರುಷ, 1,348 ಮಹಿಳಾ ಪೌರಕಾರ್ಮಿಕರಿಗೆ ಆರೋಗ್ಯ ತಪಾಸಣೆ ನಡೆಸಲಾಯಿತು ಎಂದು ಮಾಹಿತಿ ನೀಡಿದರು.

256 ಪೌರಕಾರ್ಮಿಕರು ಮಧುಮೇಹದಿಂದ ಬಳಲುತ್ತಿದ್ದು, 254 ಮಂದಿಗೆ ಅಧಿಕ ರಕ್ತದೊತ್ತಡವಿದೆ. ನಾಲ್ವರಿಗೆ ಹೃದಯ ಸಂಬಂಧಿ ಸಮಸ್ಯೆಗಳಿದ್ದು, 57 ಮಂದಿಗೆ ದಂತ, 39 ಮಂದಿಗೆ ಕಣ್ಣು, 16 ಮಂದಿಗೆ ಕಿವಿ ಸಮಸ್ಯೆಗಳಿವೆ. 43 ಜ್ವರದ ಪ್ರಕರಣಗಳು ದಾಖಲಾಗಿದ್ದು, 67 ಮಂದಿಗೆ ರಕ್ತಹೀನತೆ ಇದೆ. 1,198 ಮಂದಿ ಹೊರ ರೋಗಿಗಳಾಗಿ ಚಿಕಿತ್ಸೆ ಪಡೆದರು ಎಂದು ಹೇಳಿದರು.


Spread the love

About Laxminews 24x7

Check Also

ನಾಳೆ ರಾಜ್ಯ ಬಜೆಟ್:‌ ಬಸ್‌ ನಿಲ್ದಾಣಗಳಲ್ಲಿ ನೇರ ಪ್ರಸಾರ

Spread the loveಬೆಂಗಳೂರು: ನಾಳೆ ರಾಜ್ಯ ಬಜೆಟ್‌ ಮಂಡನೆಯಾಗಲಿದ್ದು, ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್‌ ಮಂಡನೆ ಮಾಡಲಿದ್ದಾರೆ. ರಾಜ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ