Breaking News

ಭಾರಿ ಮಳೆ: ಸಿಡಿಲು ಬಡಿದು ಬೆಳಗಾವಿಯಲ್ಲಿ ರೈತ ಸಾವು

Spread the love

ಬೆಳಗಾವಿ: ಕಳೆದ ರಾತ್ರಿ ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಮದ್ದೂರ ಗ್ರಾಮದಲ್ಲಿ ಭಾರಿ ಮಳೆ ಹಾಗೂ ಸಿಡಿಲಿಗೆ ರೈತ ಸಾವನ್ನಪ್ಪಿರುವ ಘಟನೆ ನಡೆದಿದೆ.

ರೈತರಾದ ಕೇದಾರಪ್ಪ ಬಸಪ್ಪ ಗುರ್ಲಹೊಸೂರ ಮತ್ತು ಭೀಮಪ್ಪ ಕೇದಾರಪ್ಪ ಗುರ್ಲಹೊಸೂರ ನಿನ್ನೆ ರಾತ್ರಿ ಲ್ಲಿ ಮೆಕ್ಕೆಜೋಳ ಮಷಿನ್ ಗೆ ಒಡೆಸಿದ್ದನ್ನು ರಾಶಿ ಕಾಯಲು ಹೋಗಿದ್ದರು.

ಈ ವೇಳೆ ಅತಿಯಾದ ಭಾರಿ ಮಳೆಯಾಗಿ ಸಿಡಿಲು ಬಡಿದು ಸ್ಥಳದಲ್ಲಿಯೇ ಕೇದಾರಪ್ಪ ಬಸಪ್ಪ ಗುರ್ಲಹೊಸೂರ (47) ಎಂಬುವರು ಸಾವನ್ನಪ್ಪಿದ್ದಾರೆ.

ಜೊತೆಯಲ್ಲಿದ್ದ ಭೀಮಪ್ಪ ಕೇದಾರಪ್ಪ ಗುರ್ಲಹೊಸೂರ ಇವರ ಸ್ಥಿತಿ ಗಂಭೀರ ವಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಧಾರವಾಡ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.


Spread the love

About Laxminews 24x7

Check Also

ಪಶ್ಚಿಮ ಘಟ್ಟಗಳ ರಕ್ಷಣೆ – ರಾಜ್ಯ ಸರ್ಕಾರ ಸಮಿತಿ ರಚಿಸಲಿ: ಬಿ.ಕೆ.ಹರಿಪ್ರಸಾದ್

Spread the loveಬೆಂಗಳೂರು: ಪಶ್ಚಿಮಘಟ್ಟದ ಸಂಪೂರ್ಣ ಪ್ರದೇಶವನ್ನು ಒಂದೇ ನಿಯಮದಡಿ ತರುವ ಬದಲು, ದಟ್ಟ ಅರಣ್ಯ ಪ್ರದೇಶಗಳಿಗೆ ಮಾತ್ರ ಕಠಿಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ