Breaking News

ಕರಾವಳಿಯಲ್ಲಿ ಜೂ.3 ರಿಂದ 5ರ ವರೆಗೆ ಭಾರೀ ಮಳೆ ಮುನ್ಸೂಚನೆ – ಯೆಲ್ಲೋ ಅಲರ್ಟ್‌ ಘೋಷಣೆ

Spread the love

ಕಾರವಾರ: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜೂ.3 ರಿಂದ ಜೂ.5ರ ವರೆಗೆ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಜೂ.1 ರಿಂದ 4ರ ವರೆಗೆ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರಿ ಮಳೆಯಾಗುವ  ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇಂದಿನಿಂದ (ಜೂ.2) ಜೂ.4 ರ ವರೆಗೆ ಅಲ್ಲಲ್ಲಿ ಅಲ್ಪ ಹಾಗೂ ಮಧ್ಯಮ ಗಾಳಿ ಸಹಿತ ಮಳೆಯಾಗಲಿದೆ. ಜೂ.5 ರಂದು ಜಿಲ್ಲೆಯ ಬಹುತೇಕ ಭಾಗದಲ್ಲಿ ಮಳೆಯಾಗುವ ಸೂಚನೆ ನೀಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದ ಕಾರವಾರ, ಅಂಕೋಲ, ಕುಮಟಾ, ಹೊನ್ನಾವರ, ಭಟ್ಕಳ ಭಾಗದಲ್ಲಿ ಹಾಗೂ ಮಲೆನಾಡು ಭಾಗದ ದಾಂಡೇಲಿ ಭಾಗದಲ್ಲಿ ಎಲ್ಲಾ ರೀತಿಯ ಜಲಸಾಹಸ ಕ್ರೀಡೆಗಳಿಗೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯ ಆದೇಶ ಮಾಡಿದ್ದಾರೆ.

ಜೂ.1 ರಿಂದ ಜಾರಿಗೆ ಬರುವಂತೆ ಮಳೆ ಮುಗಿಯುವ ವರೆಗೆ ಈ ಆದೇಶ ಇರಲಿದ್ದು ಕಡಲ ತೀರಗಳಿಗೂ ಸಹ ಪ್ರವಾಸಿಗರಿಗೆ ನಿರ್ಬಂಧ ಇರಲಿದೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ