Breaking News

ದ. ಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರ; ಜು.18 ರಂದು ಶಾಲಾ – ಕಾಲೇಜುಗಳಿಗೆ ರಜೆ

Spread the love

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ನಾಳೆ (ಜುಲೈ 18) ರಜೆ ಘೋಷಿಸಲಾಗಿದೆ.

ಹವಾಮಾನ ಇಲಾಖೆಯು ಜಿಲ್ಲೆಯಲ್ಲಿ ‘ಆರೆಂಜ್ ಅಲರ್ಟ್’ ಘೋಷಿಸಿರುವ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ಈ ಆದೇಶ ಹೊರಡಿಸಿದ್ದಾರೆ.

ಅಂಗನವಾಡಿಯಿಂದ ದ್ವಿತೀಯ ಪಿಯುಸಿವರೆಗಿನ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ, ಖಾಸಗಿ ಶಾಲಾ ಕಾಲೇಜುಗಳಿಗೆ ಶನಿವಾರ ರಜೆ ಘೋಷಿಸಿ ಡಿಸಿ ಹೆಚ್.ವಿ ದರ್ಶನ್ ಆದೇಶ ಹೊರಡಿಸಿದ್ದಾರೆ.


Spread the love

About Laxminews 24x7

Check Also

ದೇವೇಗೌಡರ ಪತ್ನಿ ಚೆನ್ನಮ್ಮ ಆರೋಗ್ಯ ಸ್ಥಿರವಾಗಿದೆ: ಆರ್‌. ಅಶೋಕ್‌

Spread the loveಬೆಂಗಳೂರು: ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವಿಪಕ್ಷ ನಾಯಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ