Breaking News

ಮಲೆನಾಡಲ್ಲಿ ಮಳೆ ಅಬ್ಬರ – ಹೆಬ್ಬೆ ಫಾಲ್ಸ್‌ನಲ್ಲಿ ಜಲವೈಭವ

Spread the love

ಚಿಕ್ಕಮಗಳೂರು: ಕಾಫಿನಾಡಿನ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಮಳೆ  ಅಬ್ಬರ ಜೋರಾಗಿದ್ದು, ತರೀಕೆರೆ  ತಾಲೂಕಿನಲ್ಲಿರುವ ಹೆಬ್ಬೆ ಫಾಲ್ಸ್‌ ಧುಮ್ಮಿಕ್ಕಿ ಹರಿಯುತ್ತಿದೆ.

ಹೆಬ್ಬೆ ಜಲಪಾತದಲ್ಲಿ ಸುಮಾರು 100 ಅಡಿಗೂ ಎತ್ತರದಿಂದ ನೀರು ಧುಮ್ಮಿಕ್ಕುತ್ತದೆ. ಹಾಲ್ನೊರೆಯಂತೆ ಧುಮ್ಮಿಕ್ಕುತ್ತಿರೋ ಫಾಲ್ಸ್‌ನ ಜಲವೈಭವ ನೋಡಲು ಪ್ರವಾಸಿಗರ ದಂಡೇ ಬರುತ್ತಿದೆ. ಈ ಜಲಪಾತಕ್ಕೆ ಸ್ಥಳಿಯರು, ಪ್ರವಾಸಿಗರು ಮಿನಿ ಜೋಗ ಎಂದೇ ಕರೆಯುತ್ತಾರೆ. 

ಕೆಮ್ಮಣ್ಣುಗುಂಡಿ ತಪ್ಪಲಿನ ಕಾಡು ಹಾಗೂ ಕಾಫಿತೋಟಗಳ ಮಧ್ಯೆ ಈ ಜಲಪಾತ ಇದೆ. ಈ ಪರಿಸರದಿಂದ ಜಲಪಾತದ ಸೌಂದರ್ಯ ಇಮ್ಮಡಿಗೊಂಡಿದೆ. ಈ ಸೌಂದರ್ಯವನ್ನು ಸವಿಯಲು ಪ್ರವಾಸಿಗರ ದಂಡೇ ಬರುತ್ತಿದೆ.

ಈ ಜಲಪಾತಕ್ಕೆ ಕೆಮ್ಮಣ್ಣುಗುಂಡಿಯಿಂದ ಸುಮಾರು 7 ಕಿ.ಮೀ ಕಾಫಿ ತೋಟದ ಒಳಗೆ ಜೀಪ್‍ನಲ್ಲೇ ಹೋಗಬೇಕು. ಹೆಬ್ಬೆ ಜಲಪಾತ ತರೀಕೆರೆಯಿಂದ ಸುಮಾರು 35-40 ಕಿಮೀ ಮೀಟರ್ ದೂರದಲ್ಲಿದೆ.


Spread the love

About Laxminews 24x7

Check Also

ವಿಜಯಪುರ | ಭೂತನಾಳ ಕೆರೆಯಲ್ಲಿ 6 ಶವ ಪತ್ತೆ – ಕೌಟುಂಬಿಕ ಕಲಹಕ್ಕೆ ಆತ್ಮಹತ್ಯೆ ಶಂಕೆ

Spread the loveವಿಜಯಪುರ: ನಗರದ ಹೊರವಲಯದಲ್ಲಿರುವ ಭೂತನಾಳ ಕೆರೆಯಲ್ಲಿ  6 ಜನರ ಶವಗಳು ಪತ್ತೆಯಾಗಿದ್ದು, ಕೌಟುಂಬಿಕ ಕಲಹಕ್ಕೆ ಕುಟುಂಬವೇ ಆತ್ಮಹತ್ಯೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ