Breaking News

ಔತಣ ಕೂಟದಲ್ಲಿ ಪಾಲ್ಗೊಂಡು, ಡಿಕೆಶಿಗೆ ಅಭಿನಂದಿಸಿದ ಹೆಬ್ಬಾಳಕರ್, ಹಟ್ಟಿಹೊಳಿ

Spread the love

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ಆಯೋಜಿಸಲಾಗಿದ್ದ ಔತಣಕೂಟದಲ್ಲಿ ಪಾಲ್ಗೊಂಡ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮತ್ತು ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಹೂಗುಚ್ಛ ನೀಡಿ ಡಿ.ಕೆ.ಶಿವಕುಮಾರ್ ಅವರನ್ನು ಅಭಿನಂದಿಸಿದರು.

ಪಕ್ಷದ ಸಂಘಟನೆಯಲ್ಲಿನ ಅವರ ಅಚಲ ಬದ್ಧತೆ, ತಳಮಟ್ಟದ ಕಾರ್ಯಕರ್ತರಿಗೆ ನೀಡಿದ ಬೆಂಬಲ ಮತ್ತು ಸವಾಲಿನ ಸಂದರ್ಭಗಳಲ್ಲಿ ಅವರು ಪ್ರದರ್ಶಿಸಿದ ದಿಟ್ಟ ನಾಯಕತ್ವ ನಿಜಕ್ಕೂ ಸ್ಪೂರ್ತಿದಾಯಕ. ಮುಂದಿನ ದಿನಗಳಲ್ಲಿ ಅವರ ನಾಯಕತ್ವದಲ್ಲಿ ಪಕ್ಷ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ರಾಜ್ಯದ ಅಭಿವೃದ್ಧಿ ಹಾಗೂ ಜನರ ಸೇವೆಗಾಗಿ ಅವರ ಸೇವೆ ನಿರಂತರವಾಗಿರಲಿ ಎಂದು ಆಶಿಸಿದರು.
ಮುಖ್ಯಮಂತ್ರಿ ಸಿದ್ಧರಾಮಯ್ಯ ಸೇರಿದಂತೆ, ಹಲವಾರು ಸಚಿವರು, ಶಾಸಕರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ