Breaking News

ಗುಂಪು-ಗುಂಪಾಗಿ ಕಾಣಿಸಿಕೊಂಡ ಕಾಡಾನೆ ಹಿಂಡು – ಡ್ರೋನ್ ಕ್ಯಾಮೆರಾದಲ್ಲಿ ದೃಶ್ಯ ಸೆರೆ

Spread the love

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕಾಡಾನೆ – ಮಾನವ ಸಂಘರ್ಷ ತೀವ್ರಗೊಳ್ಳುತ್ತಿದೆ. ಈ ಮಧ್ಯೆ ಕಾಡಾನೆಗಳ ಹಿಂಡು ಕಾಣಿಸಿಕೊಂಡಿರುವುದು ಡ್ರೋನ್‌ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವಿರಾಜಪೇಟೆ ತಾಲೂಕಿನ ಕುಕ್ಲೂರು ಗ್ರಾಮದಲ್ಲಿ ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿದೆ.

ಈ ಸುಂದರ ದೃಶ್ಯ ಪ್ರಕೃತಿ ಹಾಗೂ ಪ್ರಾಣಿಪ್ರಿಯರಿಗೆ ಮುದ ನೀಡಿದ್ರೂ, ಗ್ರಾಮಸ್ಥರಲ್ಲಿ ಆತಂಕ ಹೆಚ್ಚಿಸಿದೆ.

ಪಾಳುಬಿದ್ದ ಗದ್ದೆಯ ಮಧ್ಯೆ ಸಂಚರಿಸುತ್ತಿದ್ದ ಕಾಡಾನೆಗಳ ವಿಡಿಯೋವನ್ನ ಸ್ಥಳೀಯರು ಡ್ರೋನ್ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾರೆ. ಈ ದೃಶ್ಯ ಇದೀಗ ಸಾಮಾಜಿಕ ಜಾಲತಾಣಗಳಲ್ಲೂ ವೈರಲ್ ಆಗುತ್ತಿದ್ದು, ಜನರು ಎಚ್ಚರಿಕೆಯಿಂದ ಓಡಾಡುವಂತೆ ಅರಣ್ಯ ಇಲಾಖೆ ಸೂಚನೆ ನೀಡಿದೆ.

ವಿರಾಜಪೇಟೆ–ಮಡಿಕೇರಿ ಮುಖ್ಯ ರಸ್ತೆ ಸಮೀಪವೇ ಕಾಡಾನೆಗಳ ಹಿಂಡು ಕಾಣಿಸಿಕೊಂಡಿರುವುದರಿಂದ ವಾಹನ ಸವಾರರು, ರಾತ್ರಿ ವೇಳೆ ಎಚ್ಚರಿಕೆಯಿಂದ ಸಂಚರಿಸಬೇಕು. ಕಾಡಾನೆಗಳು ಕಂಡರೆ ಅವುಗಳ ಬಳಿ ತೆರಳದೇ, ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡುವಂತೆಯೂ ಕೋರಿದೆ.


Spread the love

About Laxminews 24x7

Check Also

ರಾಜ್ಯದಲ್ಲಿ ಬರ – 177 ತಾಲೂಕುಗಳಲ್ಲಿ 46,324 ಕೋಟಿ ಬೆಳೆ ನಷ್ಟ , 7,142 ಕೋಟಿ ನೆರವಿಗೆ ಮನವಿ

Spread the loveಬೆಂಗಳೂರು: ರಾಜ್ಯದ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನ ಬರಪೀಡಿತ  ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿ ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ