Breaking News

ಹಿಡಕಲ್ ಜಲಾಶಯ ಭರ್ತಿ

Spread the love

ಚಿಕ್ಕೋಡಿ: ಬೆಳಗಾವಿ  ಜಿಲ್ಲೆಯ ಹುಕ್ಕೇರಿ ತಾಲೂಕಿನ ರಾಜಾ ಲಖಮಗೌಡ ಹಿಡಕಲ್ ಜಲಾಶಯ  ಸಂಪೂರ್ಣ ಭರ್ತಿಯಾಗಿದ್ದು, ಜಿಲ್ಲೆಯ ರೈತರಲ್ಲಿ ಸಂತಸ ಮೂಡಿಸಿದೆ.

51 ಟಿಎಂಸಿ ಸಾಮರ್ಥ್ಯದ ಹಿಡಕಲ್ ಜಲಾಶಯಕ್ಕೆ 8,523 ಕ್ಯೂಸೆಕ್ ನೀರು ಒಳಹರಿವು ಇದ್ದು, 4,655 ಕ್ಯೂಸೆಕ್ ನೀರು ಹೊರಹರಿವಿದೆ. ಸದ್ಯ ನೀರಾವರಿ ಯೋಜನೆಗಳ ಕಾಲುವೆಗಳ ಮೂಲಕ ನೀರನ್ನು ಹೊರಹರಿಸಲಾಗುತ್ತಿದೆ.

ಹಿಡಕಲ್ ಜಲಾಶಯ ಭರ್ತಿಯಾಗಿರುವುದು ಬೆಳಗಾವಿ ಮಾತ್ರವಲ್ಲದೆ ಬಾಗಲಕೋಟೆ ಜಿಲ್ಲೆಯ ರೈತರಿಗೂ ನೆಮ್ಮದಿ ತಂದಿದೆ. ಜಲಾಶಯದ ನೀರು ನೀರಾವರಿ ಯೋಜನೆಗಳಿಗೆ ಪ್ರಮುಖ ಆಧಾರವಾಗಿರುವುದರಿಂದ, ಜಲಾಶಯ ಭರ್ತಿಯಾಗಿರುವುದು ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಲಿದೆ.


Spread the love

About Laxminews 24x7

Check Also

ರಾಜ್ಯದಲ್ಲಿ ಬರ – 177 ತಾಲೂಕುಗಳಲ್ಲಿ 46,324 ಕೋಟಿ ಬೆಳೆ ನಷ್ಟ , 7,142 ಕೋಟಿ ನೆರವಿಗೆ ಮನವಿ

Spread the loveಬೆಂಗಳೂರು: ರಾಜ್ಯದ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನ ಬರಪೀಡಿತ  ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿ ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ