Breaking News

ಸುವರ್ಣ ಸೌಧದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಹೈ-ವೋಲ್ಟೇಜ್ ಮೀಟಿಂಗ್

Spread the love

ಬೆಳಗಾವಿ: ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಇಂದು ಸುವರ್ಣ ಸೌಧದಲ್ಲಿ ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳ ಕುರಿತು ಸುದೀರ್ಘ ಪರಿಶೀಲನೆ ನಡೆಸಿದರು.

ಗೋಕಾಕ್‌ನಿಂದ ಹೆಲಿಕಾಪ್ಟರ್ ಮೂಲಕ ಆಗಮಿಸಿದ ಸಚಿವರು, ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.

ಹೆಲಿಕಾಪ್ಟರ್ ಮೂಲಕ ಗೋಕಾಕ್‌ನಿಂದ ನೇರವಾಗಿ ಬೆಳಗಾವಿಯ ಸುವರ್ಣ ವಿಧಾನ ಸೌಧಕ್ಕೆ ಆಗಮಿಸಿ, ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ಪ್ರಗತಿಯಲ್ಲಿರುವ ಯೋಜನೆಗಳ ಕುರಿತು ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು.

ಜಿಲ್ಲೆಯ ರಸ್ತೆ ಅಭಿವೃದ್ಧಿ, ಆರೋಗ್ಯ ಸೇವೆ ಹಾಗೂ ಮೂಲಭೂತ ಸೌಕರ್ಯಗಳ ಕುರಿತು ಚರ್ಚಿಸಿದ ಸಚಿವರು, ಬಾಕಿ ಇರುವ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ಶೀಘ್ರವೇ ಪೂರ್ಣಗೊಳಿಸಲು ಕಟ್ಟುನಿಟ್ಟಿನ ಸೂಚನೆ ನೀಡಿದರು. ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕೆಲಸ ಮಾಡಿ ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕು ಎಂದು ಅವರು ಎಚ್ಚರಿಕೆ ನೀಡಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಪೊಲೀಸ್ ಕಮಿಷನರ್ ಲೋಕೇಶ್ ಕುಮಾರ್, ಎಸ್ಪಿ ಡಾ. ಕೆ. ರಾಮರಾಜನ್, ಎಸ್ಪಿ ಭೂಷಣ್ ಬೊರ್ಸೆ, ಜಿಪಂ ಸಿಇಒ ರಾಹುಲ್ ಶಿಂದೆ ಹಾಗೂ ಪಿಡಬ್ಲ್ಯುಡಿ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಸಭೆಯ ನಂತರ ಸಚಿವ ಸತೀಶ್ ಜಾರಕಿಹೊಳಿ ಅವರು ಶಾಸಕ ಆಸೀಫ್ ಸೇಠ್ ಮತ್ತು ಬಾಬಾಸಾಹೇಬ್ ಪಾಟೀಲ್ ಅವರೊಂದಿಗೆ ಹೆಲಿಕಾಪ್ಟರ್ ಮೂಲಕ ಬಳ್ಳಾರಿಗೆ ಪ್ರಯಾಣ ಬೆಳೆಸಿದರು.


Spread the love

About Laxminews 24x7

Check Also

ಅಂತರರಾಷ್ಟ್ರೀಯ ರೋಬೋಟಿಕ್ಸ್ ಸ್ಪರ್ಧೆ ಗೆದ್ದ ಬೆಳಗಾವಿ ವಿದ್ಯಾರ್ಥಿಗಳು

Spread the love ಬೆಳಗಾವಿ : ನಗರದ ಶ್ರೀ ಸಿದ್ಧರಾಮೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡುವ ಒಬ್ಬರು ವಿದ್ಯಾರ್ಥಿಗಳು ಇಂಡೋನೇಷ್ಯಾದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ