Breaking News

ಹೈಕಮಾಂಡ್‌ ಅವಕಾಶ ಕೊಟ್ಟರೆ ಮತ್ತೆರಡು ಬಜೆಟ್‌ ಮಂಡನೆ: ಸಿದ್ದರಾಮಯ್ಯ

Spread the love

ಮೈಸೂರು: ಹೈಕಮಾಂಡ್‌ ಅವಕಾಶ ಕೊಟ್ಟರೆ ಮತ್ತೆರಡು ಬಜೆಟ್‌  ಮಂಡನೆ ಮಾಡುತ್ತೇನೆ. ಅವರು ಮುಂದುವರೆಯಿರಿ ಎಂದರೆ ಮುಂದುವರೆಯುತ್ತೇನೆ. ಎಲ್ಲದೂ ಹೈಕಮಾಂಡ್‌ಗೆ ಬಿಟ್ಟ ವಿಚಾರ ಎಂದು ಸಿಎಂ ಸಿದ್ದರಾಮಯ್ಯ  ಹೇಳಿದ್ದಾರೆ.

ಮೈಸೂರಿನಲ್ಲಿ  ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, ನಾಯಕತ್ವ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿದರು. ಯಾರೊ ಏನೋ ಹೇಳುತ್ತಾರೆ ಎಂಬುದು ನನಗೆ ಮುಖ್ಯ ಅಲ್ಲ. ನನಗೆ ಹೈಕಮಾಂಡ್ ತೀರ್ಮಾನವಷ್ಟೇ ಮುಖ್ಯ. ಹೈಕಮಾಂಡ್ ಬಗ್ಗೆ ನನಗೆ ಸಂಪೂರ್ಣ ವಿಶ್ವಾಸ ಇದೆ ಎಂದಿದ್ದಾರೆ.

ಮೈಸೂರಿನ ಜನ ಮಾತ್ರ ಅಲ್ಲ, ಇಡೀ ನಾಡಿನ ಜನ ನಾನು ಇರಬೇಕೆಂದು ಬಯಸಿದ್ದಾರೆ. ಈ ಬಗ್ಗೆ ಅಂತಿಮ ತೀರ್ಮಾನ ಮಾಡುವುದು ಹೈಕಮಾಂಡ್. ಹೈಕಮಾಂಡ್ ತೀರ್ಮಾನಕ್ಕೆ ನಾನು ಬದ್ಧ. ಬಜೆಟ್‌ನ ದಾಖಲೆಗಳ ಮೇಲೆ ನಂಬಿಕೆ ಇಲ್ಲ. ಆದರೆ ಇನ್ನರೆಡು ಬಜೆಟ್ ಮಂಡಿಸುವ ಅವಕಾಶ ಸಿಕ್ಕರೆ ಮಂಡಿಸುತ್ತೇನೆ. ಎಲ್ಲವನ್ನೂ ತೀರ್ಮಾನ ಮಾಡುವುದು ಹೈಕಮಾಂಡ್. ಈ ವಿಚಾರದಲ್ಲಿ ಏನೇ ಹಿಂದೆ ಮುಂದೆ ಪ್ರಶ್ನೆ ಕೇಳಿದರು ನನ್ನ ಉತ್ತರ ಹೈಕಮಾಂಡ್. ಜನ ಅವಕಾಶ ಕೊಟ್ಟರೆ ಮಂಡಿಸುತ್ತೇನೆ ಎಂದಿದ್ದಾರೆ.

ಬಜೆಟ್‌ಗೆ ಸಾಲ ಮಾಡಿದ್ದನ್ನು ಸಮರ್ಥಿಸಿಕೊಂಡ ಸಿಎಂ, ಅಭಿವೃದ್ಧಿಗಾಗಿ ಸಾಲ ಮಾಡಬೇಕಾಗುತ್ತದೆ. ಹೀಗಾಗಿ ಸಾಲ ಮಾಡಿದ್ದೇನೆ. ರಾಜ್ಯದ ಮಿತಿಯ ಒಳಗಡೆ ಸಾಲ ಮಾಡಿದ್ದೇನೆ. ಸಾಲದಿಂದ ರಾಜ್ಯದ ಜನರಿಗೆ ಹೊರೆಯಾಗಿಲ್ಲ. ಕೇಂದ್ರ ಸರ್ಕಾರ ರಾಜ್ಯಕ್ಕೆ ಮಾಡಿದ್ದ ಅನ್ಯಾಯದಿಂದ ರಾಜ್ಯದ ಜನರಿಗೆ ಹೊರೆಯಾಗಿದೆ. ಮೋದಿ ಅಧಿಕಾರಕ್ಕೆ ಬಂದ ಮೇಲೆ ಎಷ್ಟು ಸಾಲ ಮಾಡಿದ್ದಾರೆ ಅನ್ನೋದು ರಾಜ್ಯ ಬಿಜೆಪಿ ನಾಯಕರಿಗೆ ಗೊತ್ತಾ? ನಾನು ಯಾವುದೇ ಒಂದು ವರ್ಗದ ಪರವಾಗಿ ಬಜೆಟ್ ಮಂಡಿಸಿಲ್ಲ. ಇದು ಎಲ್ಲಾ ವರ್ಗದ ಬಜೆಟ್ ಎಂದಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ