Breaking News
Home / Madikeri / ಜನವರಿ 12ರಂದು ಹುಬ್ಬಳ್ಳಿಗೆ ಆಗಮಿಸಲಿರುವ ಮೋದಿ: ನಗರದಲ್ಲಿ ಭರದಿಂದ ಸಾಗಿದ ಸಿದ್ಧತೆ ಕಾರ್ಯ

ಜನವರಿ 12ರಂದು ಹುಬ್ಬಳ್ಳಿಗೆ ಆಗಮಿಸಲಿರುವ ಮೋದಿ: ನಗರದಲ್ಲಿ ಭರದಿಂದ ಸಾಗಿದ ಸಿದ್ಧತೆ ಕಾರ್ಯ

Spread the love

ಹುಬ್ಬಳ್ಳಿ, : ವಾಣಿಜ್ಯನಗರಿ ಹುಬ್ಬಳ್ಳಿಗೆ ಜನವರಿ 12ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 26ನೇ ರಾಷ್ಟ್ರೀಯ ಯುವಜನೋತ್ಸವ ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ನಗರದಲ್ಲಿ ಸ್ವಚ್ಛತೆ ಹಾಗೂ ಸಿದ್ಧತೆ ಕಾರ್ಯಗಳು ಭರದಿಂದ ಸಾಗಿದೆ.

ಹುಬ್ಬಳ್ಳಿಯ ರೈಲ್ವೆ ಮೈದಾನಕ್ಕೆ ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ರಮನ್ ಗುಪ್ತಾ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ನಿಟ್ಟಿನಲ್ಲಿ ರೈಲ್ವೆ ಮೈದಾನದಲ್ಲಿ ಸಿದ್ಧತೆ ಕಾರ್ಯ ಭರದಿಂದ ಸಾಗಿದ್ದು, ಬಣ್ಣ ಹಚ್ಚುವ ಹಾಗೂ ಸ್ವಚ್ಚತಾ ಕಾರ್ಯ ಜೋರಾಗಿ ನಡೆದಿದೆ. ಇನ್ನು ಜನವರಿ 12 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಗರಕ್ಕೆ ಆಗಮಿಸುತ್ತಿದ್ದು, ಅವರ ಸುರಕ್ಷತೆ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯಿಂದ ಸೂಕ್ತ ಭದ್ರತೆಯನ್ನು ಕೈಗೊಳ್ಳಲಾಗುತ್ತಿದೆ. ಅಲ್ಲದೇ ಆಯಕಟ್ಟಿನ ಪ್ರದೇಶದಲ್ಲಿ ಸಾಕಷ್ಟು ಸಿದ್ಧತೆ ಕಾರ್ಯವನ್ನು ನಡೆಸಿದ್ದು, ಮದುವಣಗಿತ್ತಿಯಂತೆ ಕಂಗೊಳಿಸಲು ಹುಬ್ಬಳ್ಳಿ ಧಾರವಾಡ ಅವಳಿನಗರ ಸಿದ್ಧವಾಗುತ್ತಿದೆ.

ಜನವರಿ 12 ರಿಂದ 16ರವರೆಗೆ ಹುಬ್ಬಳ್ಳಿ, ಧಾರವಾಡದಲ್ಲಿ ರಾಷ್ಟ್ರೀಯ ಯುವ ಸಪ್ತಾಹದ ಅಂಗವಾಗಿ ಯುವ ಜನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಇದರ ಉದ್ಘಾಟನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮಿಸಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಹೇಳಿದ್ದರು.

ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದ ಅವರು, ಜನವರಿ 12 ರಂದು ಮಧ್ಯಾಹ್ನ 1:30ಕ್ಕೆ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಅವರು ಆಗಮಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಬಾಲಿವುಡ್ ನಟರಿಗೂ ಆಹ್ವಾನ ನೀಡಲಾಗುತ್ತಿದೆ ಎಂದ ಜೋಶಿ, ಸ್ಥಳದಲ್ಲೇ ನಟ ಅಕ್ಷಯಕುಮಾರ್ ಅವರಿಗೆ ಕರೆ ಮಾಡಿ ಯುವ ಜನೋತ್ಸವಕ್ಕೆ ಆಗಮಿಸುವಂತೆ ಆಹ್ವಾನ ನೀಡಿದ್ದರು. ಪ್ರಧಾನಮಂತ್ರಿಗಳು ಆಗಮಿಸುತ್ತಿರುವುದರಿಂದ ನೀವೂ ಕಾರ್ಯಕ್ರಮಕ್ಕೆ ಬರಬೇಕು ಎಂದು ಜೋಶಿ ಮನವಿ ಮಾಡಿದ್ದರು. ಆದರೆ, ಅಕ್ಷಯ್‌ ಕುಮಾರ್‌ ಅವರು ಲಂಡನ್‌ಗೆ ಹೊರಟಿರುವುದಾಗಿ ಹೇಳಿದ್ದಾರೆ.

ಪೋಸ್ಟ್ ಕೋವಿಡ್ ನಂತರ ಮೊದಲ ಬಾರಿಗೆ ಮೋದಿ ಅವರು ಧಾರವಾಡಕ್ಕೆ ಆಗಮಿಸಲಿದ್ದಾರೆ. ಐದು ದಿನಗಳ ಕಾಲ ನಡೆಯುವ ಈ ಕಾರ್ಯಕ್ರಮದಲ್ಲಿ ಸ್ಥಳೀಯ ಕಲಾವಿದರಿಗೆ ಆದ್ಯತೆ ನೀಡಲಾಗಿದೆ. ಕವಿವಿಯಲ್ಲಿ ಇವೆಂಟ್ ನಡೆಯುತ್ತದೆ. ಉದ್ಘಾಟನೆ ಕಾರ್ಯಕ್ರಮದ ಸ್ಥಳ ಇನ್ನೂ ಅಂತಿಮಗೊಂಡಿಲ್ಲ. ಅವಳಿನಗರದ ಎಲ್ಲ ಕಡೆಯೂ ವೇದಿಕೆ ಮಾಡಲಿದ್ದೇವೆ. ಅಲ್ಲದೇ ಐಐಟಿ ಉದ್ಘಾಟನೆ, ಹುಬ್ಬಳ್ಳಿ ರೈಲ್ವೆ ಫ್ಲಾಟ್‌ಫಾರ್ಮ್ ಸೇರಿ ಹಲವು ಉದ್ಘಾಟನಾ ಕಾರ್ಯಕ್ರಮಗಳೂ ಅಂದು ಮೋದಿ ಅವರಿಂದ ನಡೆಯಲಿವೆ ಎಂದು ಜೋಶಿ ಮಾಹಿತಿ ನೀಡಿದ್ದರು.


Spread the love

About Laxminews 24x7

Check Also

ಸರ್ಕಾರೇತರ ವಾಹನಗಳ ಮೇಲೆ ಸರ್ಕಾರಿ ಲಾಂಛನ, ಚಿಹ್ನೆಗೆ ಬ್ರೇಕ್; ವಿಶೇಷ ತಂಡ ಕಾರ್ಯಾಚರಣೆ

Spread the loveಬೆಂಗಳೂರು, ಮೇ.25: ರಾಜ್ಯದಲ್ಲಿ ಕೇಂದ್ರ ಹಾಗೂ ಸರ್ಕಾರದ ವಾಹನಗಳಿಗೆ (Government Vehicles) ಮಾತ್ರ ಕರ್ನಾಟಕ ಸರ್ಕಾರದ ಹೆಸರು, ಲಾಂಛನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ