ಹುಬ್ಬಳ್ಳಿ: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡುತ್ತಿರುವ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ವಿ ಸಂಕನೂರು ಅವರ ಪರ ಪ್ರಚಾರದಲ್ಲಿ ಕೈಗೊಂಡ ನಂತರ ಮಾತನಾಡಿದ ಅವರು, ಯಡಿಯೂರಪ್ಪ ಅವರು ನಮ್ಮ ನಾಯಕ ಮತ್ತು ಪಕ್ಷವೇ ಅವರನ್ನು ಆಯ್ಕೆ ಮಾಡಿದೆ, ಸಿಎಂ ವಿರುದ್ಧ ಯತ್ನಾಳ್ ಯಾವುದೇ ಕಾರಣದಿಂದ ಮಾತನಾಡಿರಲಿ, ಅದರ ಬಗ್ಗೆ ನಾನು ಕಾಮೆಂಟ್ ಮಾಡುವುದಿಲ್ಲ ಎಂದು ಹೇಳಿದರು.
ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕೋವಿಡ್-19 ಮತ್ತು ಪ್ರವಾಹ ಪರಿಸ್ಥಿತಿಯನ್ನು ಯಶಸ್ವಿಯಾಗಿ ನಿಭಾಯಿಸಿದೆ,ಕೊರೋನಾ ಕಾರಣದಿಂದಾಗಿ ಸರ್ಕಾರದ ಆರ್ಥಿಕ ಸ್ಥಿತಿ ಸಾಮಾನ್ಯ ಸ್ಥಿತಿಗೆ ಬಂದಿಲ್ಲ ಮತ್ತು ಶಾಸಕರಿಗೆ ತಮ್ಮ ಕ್ಷೇತ್ರಗಳ ಅಭಿವೃದ್ಧಿಗೆ ವಿನಿಯೋಗಿಸಲು ಯಾವುದೇ ಹಣವಿಲ್ಲ ಎಂದು ಹೇಳಿದ್ದಾರೆ.
ಶಾಸಕರು ಅನುದಾನವನ್ನು ನ್ಯಾಯಯುತವಾಗಿ ಬಳಸಿಕೊಳ್ಳಬೇಕು ಎಂದು ಹೇಳಿದ ಅವರು ಎಲ್ಲಾ ಉಪ ಚುನಾವಣೆ ಮತ್ತು ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುತ್ತದೆ ಎಂಬ ವಿಶ್ವಾಸ ವ್ಯಕ್ತ ಪಡಿಸಿದರು.
*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??
ಸುದ್ದಿ ಮತ್ತು ಜಾಹೀರಾತುಗಳಿಗೆ ಸಂಪರ್ಕಿಸಿರಿ: 8123967576
Laxmi News