Breaking News

ಶ್ರೀನಗರದಲ್ಲಿ ಹಿಂದೂ ಸಮ್ಮೇಳನ

Spread the love

ಬೆಳಗಾವಿ: ಮಹಾಂತೇಶ ನಗರ, ಶ್ರೀನಗರ ಹಾಗೂ ಶಿವಬಸವ ನಗರ ಹಿಂದೂ ಸಮ್ಮೇಳನ ಸಮಿತಿಯಿಂದ ಫೆ.6ರಂದು ಸಂಜೆ 6ಕ್ಕೆ ಶ್ರೀನಗರ ಸಾಯಿ ಮಂದಿರ ಎದುರಿನ ಮೈದಾನದಲ್ಲಿ  ವಿರಾಟ ಹಿಂದೂ ಸಮ್ಮೇಳನ ಆಯೋಜಿಸಲಾಗಿದೆ ಎಂದು ಸಮಿತಿ ಅಧ್ಯಕ್ಷ ಎ.ಆರ್.ಪಾಟೀಲ ತಿಳಿಸಿದರು.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರಂಜಿಮಠದ ಗುರುಸಿದ್ಧ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಯುವ ಬ್ರಿಗೇಡ್ ಮುಖ್ಯಸ್ಥ ಚಕ್ರವರ್ತಿ ಸೂಲಿಬೆಲೆ ಪ್ರಮುಖ ಭಾಷಣ ಮಾಡುವರು. ಸಮುತ್ಕರ್ಷದ ಜಿಲ್ಲಾ ಮುಖ್ಯಸ್ಥೆ ಪರಿಣಿತಾ ಪಾಟೀಲ ಇತರರು ಪಾಲ್ಗೊಳ್ಳುವರು ಎಂದು  ತಿಳಿಸಿದರು.
ಸಮ್ಮೇಳನಕ್ಕೂ ಮುಂಚೆ ಸಂಜೆ 4ಕ್ಕೆ ಶ್ರೀನಗರದ ಸರ್ಕಲ್ ಮೈದಾನದವರೆಗೆ ನಡೆಯುವ ಶೋಭಾ ಯಾತ್ರೆಯಲ್ಲಿ ವಿವಿಧ ಮಹಾಪುರುಷರ ವೇಷಧರಿಸಿದ ಮಕ್ಕಳು, ಯುವಕರು, ಮಹಿಳೆಯರು ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ. ಸಮ್ಮೇಳನದ ಪ್ರಯುಕ್ತ ಕಳೆದ ಒಂದು ವಾರದಿಂದ ಗಾಯನ ಸ್ಪರ್ಧೆ, ರಂಗೋಲಿ ಸ್ಪರ್ಧೆ, ದೇಸಿ ಆಟ, ವಾಲಿಬಾಲ್, ಅಗ್ನಿ ರಹಿತ ಅಡುಗೆ ಸ್ಪರ್ಧೆಗಳ ಜತೆಗೆ ಸಾಮೂಹಿಕ ಲಲಿತಾ ಸಹಸ್ರನಾಮ ಪಠಣ ಮತ್ತು ಉಡಿ ತುಂಬುವ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು ಎಂದು ವಿವರಿಸಿದರು.
ಸಮಿತಿಯ ಗೌರವಾಧ್ಯಕ್ಷ ಎ.ಎಸ್.ಪಾಶ್ಚಾಪುರೆ, ಕಾರ್ಯದರ್ಶಿ ಡಾ.ಬಸವರಾಜ ಭಾಗೋಜಿ ಇದ್ದರು.

Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ